Advertisement

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

07:33 PM May 18, 2022 | Team Udayavani |

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.

Advertisement

ಬೈಜಾಲ್ ಅವರು ‘ವೈಯಕ್ತಿಕ ಕಾರಣಗಳನ್ನು’ ಉಲ್ಲೇಖಿಸಿ ತಮ್ಮ ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೈಜಾಲ್ ಡಿಸೆಂಬರ್ 2016 ರಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಗೊಂಡಿದ್ದರು.

ಅವರು ಈ ಹಿಂದೆ ಹಲವಾರು ಆಡಳಿತ-ಸಂಬಂಧಿತ ವಿಷಯಗಳ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಂಘರ್ಷಕ್ಕಿಳಿದಿದ್ದರು.

1969 ರ ಬ್ಯಾಚ್ ಐಎಎಸ್ ಅಧಿಕಾರಿ ಬೈಜಾಲ್ ಅವರು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿದ್ದರು. ಅಟಲ್ ಬಿಹಾರಿ ವಾಜಪೇಯಿ ಸರಕಾರದಲ್ಲಿ ಗೃಹ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ : ಕುತುಬ್ ಮಿನಾರ್ ರಾಜ ವಿಕ್ರಮಾದಿತ್ಯ ನಿರ್ಮಿಸಿದ್ದು: ಧರಂ ವೀರ್ ಶರ್ಮಾ

Advertisement
Advertisement

Udayavani is now on Telegram. Click here to join our channel and stay updated with the latest news.

Next