ನವದೆಹಲಿ:ಕೋವಿಡ್ 19 ಸೋಂಕು ತೀವ್ರವಾಗುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇನ್ನೂ ಒಂದು ವಾರ ಕೋವಿಡ್ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ:ಸತತ ಸೋಲಿನ ಹಿನ್ನೆಲೆಯಲ್ಲಿ ಪ್ರಯೋಗಕ್ಕಿಳಿದ ಸನ್ ರೈಸರ್ಸ್: ವಾರ್ನರ್ ಬದಲು ಹೊಸ ನಾಯಕನ ಆಯ್ಕೆ
ಲಾಕ್ ಡೌನ್ ವಿಸ್ತರಣೆಯ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸುವ ಸಾಧ್ಯತೆ ಇದೆ. ಸೋಮವಾರ ಬೆಳಗ್ಗೆ 5ಗಂಟೆವರೆಗೆ ಲಾಕ್ ಡೌನ್ ಜಾರಿಯಲ್ಲಿದೆ.
ದೆಹಲಿಯಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಮತ್ತೊಂದೆಡೆ ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಲಾಕ್ ಡೌನ್ ವಿಸ್ತರಿಸುವಂತೆ ಸಾರ್ವಜನಿಕರು ಒಲವು ವ್ಯಕ್ತಪಡಿಸಿರುವುದಾಗಿ ಕಳೆದ ಭಾನುವಾರ ಕೇಜ್ರಿವಾಲ್ ತಿಳಿಸಿದ್ದರು.
ಶನಿವಾರ(ಮೇ 1) ದೆಹಲಿಯಲ್ಲಿ ದಾಖಲೆಯ 27,000 ಕೋವಿಡ್ ಪ್ರಕರಣ ಪತ್ತೆಯಾಗಿತ್ತು. 24ಗಂಟೆಯಲ್ಲಿ 375ಮಂದಿ ಸಾವನ್ನಪ್ಪಿದ್ದರು. ಸತತವಾಗಿ ಕಳೆದ 13 ದಿನಗಳ ಕಾಲ ದಿನಂಪ್ರತಿ 20ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣ ಪತ್ತೆಯಾಗುತ್ತಿದೆ.