ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಪೀಠವು ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾಯಾಲಯವು, “ನಾವು ಕ್ಯುರೇಟಿವ್ ಅರ್ಜಿಗಳು ಮತ್ತು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ನಮ್ಮ ಅಭಿಪ್ರಾಯದಲ್ಲಿ, ರೂಪಾ ಅಶೋಕ್ ಹುರ್ರಾ ವಿರುದ್ಧ ಅಶೋಕ್ ಹುರ್ರಾ ಪ್ರಕರಣದಲ್ಲಿ ಈ ನ್ಯಾಯಾಲಯದ ತೀರ್ಪಿನಲ್ಲಿ ಸೂಚಿಸಲಾದ ನಿಯತಾಂಕಗಳಲ್ಲಿ ಯಾವುದೇ ಪ್ರಕರಣವನ್ನು ಮಾಡಲಾಗಿಲ್ಲ. ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ನಾಲ್ಕು ನ್ಯಾಯಾಧೀಶರ ಪೀಠವು ಬುಧವಾರ ತನ್ನ ಆದೇಶದಲ್ಲಿ ತಿಳಿಸಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 14 ರಂದು ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿಸೋಡಿಯಾ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದ್ದರು.
ಇದನ್ನೂ ಓದಿ: ಹಣೆಗೆ ಗಾಯವಾಗಿ ಚಿಕಿತ್ಸೆಗೊಳಗಾಗಿದ್ದ ಮಮತಾ ಬ್ಯಾನರ್ಜಿ ಆಸ್ಪತ್ರೆಯಿಂದ ಡಿಸ್ಚಾರ್ಜ್