ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಶದಲ್ಲಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಸೋಮವಾರ ಎರಡು ವಾರಗಳವರೆಗೆ ವಿಸ್ತರಿಸಿದೆ.
ಸಿಸೋಡಿಯಾ ನ್ಯಾಯಾಂಗ ಬಂಧನ ಇಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಕೋರಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಎಪ್ರಿಲ್ 17 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಕಳೆದ ವಾರ, ವಿಶೇಷ ಸಿಬಿಐ ನ್ಯಾಯಾಲಯವು ಅಬಕಾರಿ ನೀತಿ ಹಗರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು, ಅಲ್ಲದೆ ಮುಂಗಡ ಕಿಕ್‌ಬ್ಯಾಕ್ ಪಾವತಿಗೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯಲ್ಲಿ ಪ್ರಮುಖ ಪಾತ್ರ” ವಹಿಸಿದ್ದಾರೆ ಎಂದು ಹೇಳಲಾಗಿತ್ತು.
ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಸುಮಾರು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಫೆಬ್ರವರಿ 26 ರಂದು ಸಿಬಿಐ ಬಂಧಿಸಿತ್ತು.
ಇದನ್ನೂ ಓದಿ: ಸಾಗರ: ಅಪ್ರಚೋದಿತ ಗೂಳಿ ದಾಳಿ; ಅದೃಷ್ಟವಶಾತ್ ಪುಟ್ಟ ಬಾಲಕ ಪಾರು