ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಆಪ್ ನಾಯಕ ಸಂಜಯ್ ಸಿಂಗ್ ಅವರು ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.
ಸಿಂಗ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಪೀಠದ ಮುಂದೆ ಉಲ್ಲೇಖಿಸಲಾಗಿದೆ. ಈ ವಿಚಾರದ ಕುರಿತು ದೆಹಲಿ ಹೈಕೋರ್ಟ್ ಇಂದು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ವಾರದ ಆರಂಭದಲ್ಲಿ, ದೆಹಲಿ ನ್ಯಾಯಾಲಯವು ಸಂಜಯ್ ಸಿಂಗ್ ಅವರ ಇಡಿ ಕಸ್ಟಡಿಯನ್ನು ಶುಕ್ರವಾರ ಅಂದರೆ ಅಕ್ಟೋಬರ್ 13 ರವರೆಗೆ ವಿಸ್ತರಿಸಿತು.
ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ಅಕ್ಟೋಬರ್ 4ರಂದು ಸಿಂಗ್ ಅವರನ್ನು ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಬಂಧಿಸಿದ್ದರು. ಸಿಂಗ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿ ಇಡಿ ಕಸ್ಟಡಿ ಅವಧಿಯನ್ನು ಐದು ದಿನಗಳ ಕಾಲ ವಿಸ್ತರಿಸುವಂತೆ ಕೋರಿತ್ತು. ಅಲ್ಲದೆ ಈಗ ರದ್ದಾದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಸಂಜಯ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ಹೇಳಿಕೊಂಡಿದೆ.
ಇದನ್ನೂ ಓದಿ: Power shortage; ವಿದ್ಯುತ್ ಬೇಡಿಕೆ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ