ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಇ.ಡಿ.ಯಿಂದ ವಿಚಾರಣೆ ಎದುರಿಸುತ್ತಿರುವ ಬಿಆರ್‌ಎಸ್ ಎಂಎಲ್‌ಸಿ ಕೆ.ಕವಿತಾ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.
ಕೇಂದ್ರ ಸರ್ಕಾರ ನಡೆಸುತ್ತಿರುವ ದೊಡ್ಡ ಪ್ರಮಾಣದ ಸಂಚು ಇದು. ಈ ಹಿನ್ನೆಲೆಯಲ್ಲಿಯೇ ಜಾರಿ ನಿರ್ದೇಶನಾಲಯದ ವತಿಯಿಂದ ನಡೆಯುತ್ತಿರುವ ವಿಚಾರಣೆಯೇ ಪ್ರಶ್ನಾರ್ಹ.
ಇದರ ಜತೆಗೆ, ಮಹಿಳೆಯನ್ನು ಜಾರಿ ನಿರ್ದೇಶನಾಲಯಕ್ಕೆ ಕರೆಯಿಸಿಕೊಂಡು ವಿಚಾರಣೆ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ತುರ್ತು ವಿಚಾರಣೆ ನಡೆಸಬೇಕು ಎಂದು ಅರಿಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಒಪ್ಪದ ನ್ಯಾಯಪೀಠ, ಮಾ.24ಕ್ಕೆ ಕವಿತಾ ಸಲ್ಲಿಕೆ ಮಾಡಿರುವ ಅರ್ಜಿಯನ್ನು ಕೈಗೆತ್ತಿಕೊಳ್ಳುವುದಾಗಿ ಸ್ಪಷ್ಟಪಡಿಸಿತು.