ಹೊಸದಿಲ್ಲಿ: ಹೆಚ್ಚುತ್ತಿರುವ ಕೋವಿಡ್ 19 ಸೋಂಕು ಪ್ರಕರಣಗಳ ಕಾರಣ ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ನ್ನು ಮತ್ತೆ ಒಂದು ವಾರ ಕಾಲ ಮುಂದುವರಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮೇ .17ರವರೆಗೆ ದೆಹಲಿಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ.
ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈ ಮಾಹಿತಿ ನೀಡಿದರು.
ಲಾಕ್ ಡೌನ್ ವಿಧಿಸಿದಂದಿನಿಂದ ಕೋವಿಡ್ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದೆ. ಸೋಂಕಿನ ಚೈನ್ ಬ್ರೇಕ್ ಆಗುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ಶೇ.35ರಷ್ಟಿದ್ದ ಪಾಸಿಟಿವಿಟಿ ದರ ಶೇ.23ಕ್ಕೆ ಇಳಿಕೆಯಾಗಿದೆ. ಈ ಲಾಕ್ ಡೌನ್ ಅವಧಿಯಲ್ಲಿ ನಾವು ಆರೋಗ್ಯ ಸೌಕರ್ಯಗಳನ್ನು ಇನ್ನಷ್ಟು ಬಲಗೊಳಿಸಿದ್ದೇವೆ ಎಂದು ಕೇಜ್ರಿವಾಲ್ ಹೇಳಿದರು.
ಇದನ್ನೂ ಓದಿ:ಭಾರತವನ್ನು ಕಾಡುತ್ತಿರುವ ಗಂಭೀರ ಕಾಯಿಲೆ :ಪಿತ್ತಜನಕಾಂಗದ ಕೊಬ್ಬು
ದೆಹಲಿಯಲ್ಲಿ ಮೆಟ್ರೋ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಯಾವುದೇ ಸಭಾಂಗಣದಲ್ಲಿ ಮದುವೆ ಇನ್ನಿತರ ಸಮಾರಂಭಗಳನ್ನು ಮಾಡುವುದನ್ನೂ ನಿಷೇಧಿಸಲಾಗಿದೆ. ಕೋರ್ಟ್ ಅಥವಾ ಮನೆಗಳಲ್ಲಿ ಮದುವೆ ಕಾರ್ಯಕ್ರಮ ನಡೆಸಬಹುದು ಆದರೆ 20 ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ನಿಯಮ ಮಾಡಲಾಗಿದೆ.