ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ ಅಬಕಾರಿ ನೀತಿಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಮದ್ಯ ಸೇವನೆಯ ವಯಸ್ಸಿನ ಮೀತಿಯನ್ನು ಇಳಿಕೆ ಮಾಡಿದೆ.
ಸೋಮವಾರ ( ಮಾರ್ಚ್ 22) ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಪರಿಷ್ಕೃತ ನೂತನ ಅಬಕಾರಿ ನೀತಿ ಪ್ರಕಟಿಸಿದ್ದು, ಮದ್ಯ ಸೇವನೆಗೆ ಈ ಹಿಂದೆ ನಿಗದಿಪಡಿಸಲಾಗಿದ್ದು 25 ವರ್ಷ ವಯೋಮಿತಿಯನ್ನು 21 ವರ್ಷಕ್ಕೆ ಇಳಿಸಿದೆ.
ಇಂದು ನೂತನ ನಿಯಮ ಘೋಷಿಸಿರುವ ಸಿಸೋಡಿಯಾ, ತಜ್ಞರ ಸಮಿತಿ ನೀಡಿರುವ ವದಿಯ ಆಧರಿಸಿ ಈ ಬದಲಾವಣೆ ಮಾಡಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯೋಮಿತಿ ಹೊಂದಿರುವವರು ಮದ್ಯದಂಗಡಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರ ಅಬಕಾರಿ ನೀತಿಯಲ್ಲಿ ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವುದಿಲ್ಲ ಎಂದು ಹೇಳಿಕೊಂಡಿದೆ. ಪರವಾನಗೆ ಇಲ್ಲದ ಮದ್ಯದಂಗಡಿಗಳನ್ನು ಮುಚ್ಚಲಾಗಿದೆ. ಇನ್ನು ಒಂದು ಪರವಾನಗೆಯಲ್ಲಿ ಹಲವು ಶಾಖೆಗಳನ್ನು ತೆರೆದಿರುವುದು ಸೇರಿದಂತೆ ಹಲವು ಅಕ್ರಮಗಳಿಗೆ ಕಡಿವಾಣ ಹಾಕಲಾಗುತ್ತಿದೆ. ಇದರಿಂದ ರಾಷ್ಟ್ರ ರಾಜಧಾನಿಗೆ ಮದ್ಯ ಕಳ್ಳಸಾಗಣೆ ಮಾಡುವುದನ್ನು ನಿಲ್ಲಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.
ಕಳ್ಳಸಾಗಣೆ, ಅಕ್ರಮಗಳನ್ನು ತಡೆದರೆ, ಸೋರಿಯಾಗುತ್ತಿರುವ ಶೇಕಡಾ 20 ರಷ್ಟು ಆದಾಯ ಸರ್ಕಾರಕ್ಕೆ ಹರಿದು ಬರಲಿದೆ . ಹೀಗಾಗಿ ದೆಹಲಿ ಸರ್ಕಾರ ಅಬಕಾರಿ ನೀತಿಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ನಿರ್ಧರಿಸಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.