ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ದೆಹಲಿ ವಿಪತ್ತು ನಿರ್ವಹಣಾ ಮಂಡಳಿ (ಡಿಡಿಎಂಎ) ಬುಧವಾರ (ಏ.20) ಘೋಷಿಸಿದೆ.
ಇದನ್ನೂ ಓದಿ:ಬಾಲಕಿಯನ್ನು ಅಪಹರಿಸಿ ವಿವಾಹ: ಅತ್ಯಾಚಾರ, ಬಾಲ್ಯ ವಿವಾಹ ಆರೋಪದಡಿ ಜೀವಾವಧಿ ಶಿಕ್ಷೆ
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜತೆ ಡಿಡಿಎಂಎ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡುತ್ತ, ಸಾರ್ವಜನಿಕ ಸ್ಥಳಗಳಲ್ಲಿ ದೆಹಲಿ ನಿವಾಸಿಗಳು ಮಾಸ್ಕ್ ಧರಿಸುವುದು ಕಡ್ಡಾಯಾಗಿದೆ. ಒಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿದ್ದು ಕಂಡು ಬಂದಲ್ಲಿ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ಡಿಡಿಎಂಎ ತಿಳಿಸಿದೆ.
ದೆಹಲಿಯಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿದ್ದರೂ ಕೂಡಾ ಶಾಲೆಗಳನ್ನು ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಈ ಬಗ್ಗೆ ತಜ್ಞರ ಜತೆ ಸಮಾಲೋಚನೆ ನಡೆಸಿ ಪ್ರತ್ಯೇಕ ಮಾರ್ಗಸೂಚಿಯನ್ನು ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂಬ ಆದೇಶ ಸರ್ಕಾರ ಕೂಡಲೇ ಹೊರಡಿಸುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.