Advertisement
ಕಿಸಾನ್ ಮಜ್ದೂರ್ ಸಭಾ (ಕೆಎಂಎಂ) ಎಂಬ ರೈತರ ಸಂಘಟನೆ ರಚನೆ ಮಾಡಿಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ. ರೈತರು ಹೊಸದಿಲ್ಲಿ ಪ್ರವೇಶಿಸುವುದನ್ನು ತಡೆಯಲು ಪೊಲೀಸರು ಈಗಾಗಲೇ ಭಾರೀ ಕ್ರಮಗಳನ್ನು ಕೈಗೊಂಡಿದ್ದಾರೆ. ರಸ್ತೆಗಳಿಗೆ ಅಡ್ಡವಾಗಿ ಪೊಲೀಸ್ ವಾಹನಗಳನ್ನು, ಬೃಹತ್ ಗಾತ್ರದ ಕಾಂಕ್ರೀಟ್ ಪಿಲ್ಲರ್‌ಗಳು, ಕಂಟೈನರ್‌ಗಳನ್ನು ಇರಿಸಲಾಗಿದೆ. ಆದರೂ ರೈತ ಸಂಘಟನೆ ಸದಸ್ಯರು ಹೊಸದಿಲ್ಲಿ ಪ್ರವೇಶ ಮಾಡಬಹುದು, ಪ್ರತಿಭಟನಕಾರರಿಂದ ಸಾರ್ವಜನಿಕ ಆಸ್ತಿಗೆ ಅಪಾಯ ಸಂಭವಿಸಬಹುದಾದ ಸಾಧ್ಯತೆಗಳಿವೆ ಎಂಬ ಕೇಂದ್ರ ಗುಪ್ತಚರ ಇಲಾಖೆಯ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಮಾ. 12ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರು: “ದಿಲ್ಲಿ ಚಲೋ’ದಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಯತ್ತ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶದ ಭೂಪಾಲ್ ರೈಲ್ವೇ ನಿಲ್ದಾಣದಲ್ಲಿ ಮಧ್ಯರಾತ್ರಿ ಪೊಲೀಸರು ವಶಕ್ಕೆ ಪಡೆದ ಘಟನೆ ಸೋಮವಾರ ನಡೆದಿದೆ. ಈ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಬಲವಾಗಿ ಖಂಡಿಸಿದ್ದಾರೆ.