Advertisement

ಫೆ.22ರಂದು ದಿಲ್ಲಿ ಮಹಾನಗರ ಪಾಲಿಕೆ ಮೇಯರ್‌ ಸ್ಥಾನಕ್ಕೆ ಚುನಾವಣೆ

09:41 PM Feb 18, 2023 | Team Udayavani |

ನವದೆಹಲಿ:ದೆಹಲಿ ಮಹಾನಗರ ಪಾಲಿಕೆ ಮೇಯರ್‌ ಸ್ಥಾನಕ್ಕೆ ಫೆ.22ರಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷದ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅಂಗೀಕಾರ ನೀಡಿದ್ದಾರೆ.

Advertisement

ದೆಹಲಿ ಪಾಲಿಕೆಯಲ್ಲಿ ನಾಮ ನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ ಆದೇಶ ನೀಡಿದ್ದ ಬೆನ್ನಲ್ಲಿಯೇ ರಾಜ್ಯ ಸರ್ಕಾರ ಹೊಸ ದಿನಾಂಕವನ್ನು ಸಕ್ಸೇನಾ ಅವರಿಗೆ ಕಳುಹಿಸಿ ಕೊಟ್ಟಿತ್ತು.

ಈ ನಡುವೆ, ಮುಖ್ಯಮಂತ್ರಿ ಕೇಜ್ರಿವಾಲ್‌ ಮಾತನಾಡಿ ಲೆಫ್ಟಿನೆಂಟ್‌ ಗವರ್ನರ್‌ ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣದ ಬಗ್ಗೆ ವಾದ ಮಂಡಿಸಲು ಅಡ್ಡಿ ಮಾಡುತ್ತಿದ್ದಾರೆ ಎಂದು ದೂರಿದ್ದರು. ಜತೆಗೆ, ಲೆ.ಗ.ಸಕ್ಸೇನಾ ನಿವಾಸದ ಮುಂದೆ ಶನಿವಾರ ಪ್ರತಿಭಟನೆ ನಡೆಸಿದ್ದ ಆಪ್‌ ಕಾರ್ಯಕರ್ತರು, ಸಕ್ಸೇನಾ ರಾಜೀನಾಮೆಗೆ ಒತ್ತಾಯಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next