ನವದೆಹಲಿ: ಇತ್ತೀಚೆಗೆ ದೆಹಲಿ ಮೆಟ್ರೋ ರೈಲಿನಲ್ಲಿ ನಡೆದ ಕೆಲವು ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಗಮನ ಸೆಳೆದಿತ್ತು. ಅದೇ ರೀತಿ ಇಬ್ಬರು ಪ್ರಯಾಣಿಕರು ದೆಹಲಿ ಮೆಟ್ರೋ ರೈಲಿನೊಳಗೆ ಮಾರಾಮಾರಿ ಹೊಡೆದಾಡಿಕೊಂಡ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ:ಕುರಾನ್ ಬಗ್ಗೆ ಡಾಕ್ಯುಮೆಂಟರಿ ಮಾಡಿ ಏನಾಗುತ್ತದೆ ನೋಡಿ..: ‘ಆದಿಪುರುಷ್’ ತಂಡಕ್ಕೆ ಕೋರ್ಟ್
ದೆಹಲಿ ಮೆಟ್ರೋದ ವಯೋಲೆಂಟ್ ಲೈನ್ ಮಾರ್ಗದಲ್ಲಿ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ರೈಲು ರಾಜಾ ನಹರ್ ಸಿಂಗ್ ಮತ್ತು ಕಾಶ್ಮೀರ್ ಗೇಟ್ ನಿಲ್ದಾಣದತ್ತ ತೆರಳುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರು ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಪ್ರಯಾಣಿಕರಿಂದ ತುಂಬಿದ್ದ ಮೆಟ್ರೋ ರೈಲಿನ ಬೋಗಿಯೊಳಗೆ ಯುವಕನೊಬ್ಬನನ್ನು ಎಳೆದು ಹೊಡೆಯುತ್ತಿದ್ದು, ಈ ಸಂದರ್ಭದಲ್ಲಿ ಇತರ ಪ್ರಯಾಣಿಕರು ಇಬ್ಬರ ಜಗಳವನ್ನು ತಪ್ಪಿಸಲು ಯತ್ನಿಸಿರುವುದು ವಿಡಿಯೋದಲ್ಲಿದೆ.
ಕಳೆದ ವಾರ ದೆಹಲಿ ಮೆಟ್ರೋದಲ್ಲಿ ಇಬ್ಬರು ಮಹಿಳೆಯರು ಹಾಗೂ ದಂಪತಿ ನಡುವೆ ತೀವ್ರ ಮಾತಿನ ಚಕಮಕಿ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದಕ್ಕಿಂತ ಮೊದಲು ದೆಹಲಿ ಮೆಟ್ರೋ ರೈಲಿನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿದ್ದ ಯುವತಿ, ಬಿಕಿನಿ ಧರಿಸಿ ಓಡಾಡಿದ್ದ ಯುವತಿ ಹಾಗೂ ಪ್ರೇಮಿಗಳ ಲಿಪ್ ಲಾಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದ ಘಟನೆ ನಡೆದಿತ್ತು.