Advertisement

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

04:27 PM Nov 17, 2024 | Team Udayavani |

ನವದೆಹಲಿ: ದೆಹಲಿಯ ಸಾರಿಗೆ ಸಚಿವ ಮತ್ತು ಹಿರಿಯ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಕೈಲಾಶ್ ಗೆಹ್ಲೋಟ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಉಲ್ಲೇಖಿಸಿ ಬರೆದ ರಾಜೀನಾಮೆ ಪತ್ರದಲ್ಲಿ ಗೆಹ್ಲೋಟ್, ಕೊಟ್ಟ ಭರವಸೆಗಳು ಈಡೇರಲಿಲ್ಲ ಮತ್ತು ಇತ್ತೀಚಿನ ವಿವಾದಗಳು ರಾಜೀನಾಮೆಗೆ ಕಾರಣವೆಂದು ಉಲ್ಲೇಖಿಸಿದ್ದಾರೆ.

ಈಡೇರದ ಭರವಸೆ:
ಆಮ್ ಆದ್ಮಿ ಪಕ್ಷದ ಹಿರಿಯ ರಾಜಕಾರಣಿಯಾಗಿರುವ ಕೈಲಾಶ್ ಗೆಹ್ಲೋಟ್ ಅವರು ಬರೆದಿರುವ ರಾಜೀನಾಮೆ ಪತ್ರದಲ್ಲಿ ದೆಹಲಿಯ ಜನರಿಗೆ ನೀಡಿದ ಪ್ರಮುಖ ಭರವಸೆಗಳನ್ನು ಈಡೇರಿಸಲು ಪಕ್ಷ ಅಸಮರ್ಥವಾಗಿದೆ ಅಲ್ಲದೆ ಯಮುನಾ ನದಿಯನ್ನು ಶುಚಿಗೊಳಿಸುವಲ್ಲಿ ಸರಕಾರ ವಿಫಲವಾಗಿರುವುದನ್ನು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಅರವಿಂದ್ ಕೇಜ್ರಿವಾಲ್ ಅವರ ಹೊಸ ಅಧಿಕೃತ ಬಂಗಲೆಯ ಸುತ್ತಲಿನ ವಿವಾದವನ್ನೂ ಅವರು ಉಲ್ಲೇಖಿಸಿದ್ದಾರೆ. ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ನಿರಂತರ ಜಗಳ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗಿದೆ ಇದೇ ರೀತಿ ಮುಂದುವರೆದರೆ ದೆಹಲಿ ಅಭಿವೃದ್ಧಿ ಕೇವಲ ಮತಿಗಷ್ಟೇ ಆಗಲಿದೆ ಎಂದು ಹೇಳಿದ್ದಾರೆ.

Advertisement

ಇದನ್ನೂ ಓದಿ: Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

Advertisement

Udayavani is now on Telegram. Click here to join our channel and stay updated with the latest news.

Next