Advertisement
ಮೈಸೂರು ದಸರಾ ಸಂದರ್ಭದಲ್ಲಿ ಕೇವಲ ಮೂರು ತಿಂಗಳ ಕಾಲ ಸ್ಥಳೀಯರು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ದಸರಾ ವಸ್ತುಪ್ರದರ್ಶನವನ್ನು ನವದೆಹಲಿಯ ದೆಹಲಿ ಹಾಥ್ ಮಾದರಿಯಲ್ಲಿ ವರ್ಷಪೂರ್ತಿ ನಡೆಯುವಂತೆ ಮೈಸೂರು ಹಾಥ್ ನಿರ್ಮಿಸುವ ಘೋಷಣೆ ಮಾಡಿದ್ದಾರೆ.
Related Articles
Advertisement
2 ಮತ್ತು 3ನೇ ಸ್ತರದ ನಗರಗಳಲ್ಲಿ ಸೂಕ್ಷ್ಮ/ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗಾಗಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಮೂಲಕ ಹೊಸ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲಾಗುವುದು.
ವಿದ್ಯುತ್ ಪ್ರಸರಣಾ ಜಾಲವನ್ನು ಬಲವರ್ಧನೆಗೊಳಿಸಲು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಮತ್ತು ಕಿತ್ತೂರು, ತಿ.ನರಸೀಪುರ ತಾಲೂಕಿನ ಮಡವಾಡಿ (ಪರಿನಾಮಿಪುರ) ಹಾಗೂ ಮೆಲೆಯೂರು, ನಂಜನಗೂಡು ತಾಲೂಕಿನ ಹೆಮ್ಮರಗಾಲ ಹಾಗೂ ಚಂದ್ರನಾಡಿ (ನಲ್ಲಿನಾಥಪುರ)ಗಳಲ್ಲಿ ವಿದ್ಯುತ್ ಉಪ ಕೇಂದ್ರಗಳನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮೂಲಕ ಸ್ಥಾಪಿಸಲಾಗುವುದು.
ಸಾಮಾಜಿಕ ಸಮಾನತೆಯ ಹರಿಕಾರ, ಪ್ರಪಂಚದಲ್ಲಿಯೇ ಪ್ರಪ್ರಥಮವಾಗಿ ಸಂಸದೀಯ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಕ್ರಾಂತಿಯೋಗಿ ಶ್ರೀ ಬಸವಣ್ಣನವರ ಚಿಂತನೆಗಳನ್ನು ನಾಡಿನಾದ್ಯಂತ ಪಸರಿಸಲು, ಅವರ ಚಿಂತನೆಗಳನ್ನು ಇನ್ನೂ ಹೆಚ್ಚಿನ ಅಧ್ಯಯನಕ್ಕೆ ಒಳಪಡಿಸಲು ಅನುಕೂಲವಾಗುವಂತೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಸವ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು 2ಕೋಟಿ ರೂ.ಅನುದಾನ ಒದಗಿಸಲಾಗುವುದು.
ಮಹಾಕವಿ ಕುವೆಂಪು ಅವರ ದರ್ಶನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕುವೆಂಪು ಅವರ ಮೈಸೂರಿನ ನಿವಾಸ ಉದಯ ರವಿಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಸಂರಕ್ಷಿಸಿ ಅಭಿವೃದ್ಧಿಪಡಿಸಲಾಗುವುದು. ಜಿಲ್ಲೆಯ ಹುಣಸೂರು ಮತ್ತು ಎಚ್.ಡಿ.ಕೋಟೆ ತಾಲೂಕಿನಲ್ಲಿ ತಲಾ 1 ಕೋಟಿ ರೂ. ವೆಚ್ಚದಲ್ಲಿ ಆದಿವಾಸಿ ಸಮುದಾಯ ಭವನ ನಿರ್ಮಾಣ. ಮೈಸೂರಿನಲ್ಲಿ ಮಾಜಿ ಸಚಿವ ದಿ.ಅಜೀಜ್ ಸೇs… ಸ್ಮಾರಕ ಸಮುದಾಯ ಭವನ ನಿರ್ಮಿಸಲು 3 ಕೋಟಿ ರೂ. ಒದಗಿಸಲಾಗುವುದು ಎಂದು ಆಯವ್ಯಯದಲ್ಲಿ ಹೇಳಲಾಗಿದೆ.
ಸ್ಮಾರಕ ಮಾಡಲು ಅಭ್ಯಂತರವಿಲ್ಲ; ಮಾತುಕತೆ ಮುಗಿದಿಲ್ಲ: ಕುವೆಂಪು ಅವರ ಮೈಸೂರಿನ ಮನೆ ಉದಯ ರವಿಯನ್ನು ರಾಜ್ಯದ ಜನತೆ ವೀಕ್ಷಿಸುವಂತೆ ಒಳ್ಳೆಯ ಉದ್ದೇಶದಿಂದ ಸರ್ಕಾರ ರಾಷ್ಟ್ರಕವಿ ಸ್ಮಾರಕ ಮಾಡಲು ಮುಂದಾಗಿದ್ದರೆ ನಮ್ಮ ಅಭ್ಯಂತರವಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಒಬ್ಬರು ಅಧಿಕಾರಿ ಬಂದು ಮಾತುಕತೆ ನಡೆಸಿದ್ದು ಬಿಟ್ಟರೆ, ಈವರೆಗೆ ಆ ಬಗ್ಗೆ ಅಂತಿಮ ಹಂತದ ಮಾತುಕತೆಗಳಾಗಿಲ್ಲ.
ಸ್ಮಾರಕ ಮಾಡುವುದಾದರೆ ನಮ್ಮದೇ ಆದ ಕೆಲ ಷರತ್ತುಗಳಿವೆ. ಷೇಕ್ಸ್‌ಪಿಯರ್, ವರ್ಡ್ಸ್‌ವರ್ಥ್ ಮ್ಯೂಸಿಯಂ ಅನ್ನು ನಾವು ನೋಡಿಬಂದಿದ್ದೇವೆ. ಅಲ್ಲಿನ ಅಂಶಗಳನ್ನು ಇಲ್ಲಿ ಅಳವಡಿಸಿಕೊಂಡರೆ ಉತ್ತಮ. ಅದನ್ನು ಬಿಟ್ಟು ನಮ್ಮಿಷ್ಟದಂತೆ ಮಾಡಿಕೊಳ್ಳುತ್ತೇವೆ ಎಂದರೆ ಉಪಯೋಗವಿಲ್ಲ.
ಮನೆ ಕುವೆಂಪು ಮಗಳು ತಾರಿಣಿ ಅವರ ಹೆಸರಿನಲ್ಲಿದೆ. ಕುವೆಂಪು ಅವರ ಪುಸ್ತಕಗಳನ್ನು ಪ್ರಕಟ ಮಾಡಬೇಕಾದ್ದರಿಂದ ತಾರಿಣಿಯವರು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕುವೆಂಪು ಅವರ ಮತ್ತೂಬ್ಬ ಮಗ ಚೈತ್ರ, ಮೊಮ್ಮಕ್ಕಳೂ ಕೂಡ ಈ ಮನೆಗೆ ಹಕ್ಕುದಾರರು. ಅವರೆಲ್ಲರ ಒಪ್ಪಿಗೆ ಪಡೆಯಬೇಕಾಗುತ್ತದೆ ಎನ್ನುತ್ತಾರೆ ಕುವೆಂಪು ಅಳಿಯ, ವಿಶ್ರಾಂತ ಕುಲಪತಿ ಡಾ.ಚಿದಾನಂದ.