ನವದೆಹಲಿ : ದೆಹಲಿಯಿಂದ ಮುಂಬೈಗೆ ಪ್ರಯಾಣಿಕರನ್ನು ಹೊತ್ತ ವಿಸ್ತಾರ ವಿಮಾನದ ಕಾಕ್ ಪಿಟ್ ನಲ್ಲಿ ಶಿಳ್ಳೆ ಸದ್ದು ಕೇಳಿದ ಹಿನ್ನೆಲೆಯಲ್ಲಿ ವಿಮಾನ ಮತ್ತೆ ದೆಹಲಿಗೆ ಹಿಂತಿರುಗಿದೆ ಎಂದು ಡಿಜಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವೇಳೆ ತಪಾಸಣೆ ನಡೆಸಿದ ಅಧಿಕಾರಿಗಳು ಪ್ರಾಥಮಿಕ ತನಿಖೆಯಲ್ಲಿ ಯಾವುದೇ ದೋಷಗಳು ಕಂಡುಬಂದಿಲ್ಲ ಇನ್ನು ಕೂಲಂಕುಷವಾಗಿ ತನಿಖೆ ನಡೆಸಿ ತಾಂತ್ರಿಕ ದೋಷಗಳು ಏನಾದರು ಇವೆಯೇ ಎಂದು ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಿಸ್ತಾರಾ — ಟಾಟಾ ಮತ್ತು ಸಿಂಗಾಪುರ್ ಏರ್‌ಲೈನ್ಸ್ ಲಿಮಿಟೆಡ್ (ಎಸ್‌ಐಎ) ಜಂಟಿ ಉದ್ಯಮವಾಗಿದ್ದು, ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಪೈಲಟ್ ವಿಮಾನವನ್ನು ವಾಪಾಸ್ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ.
ಪ್ರಯಾಣಿಕರ ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದೆಂದು ಏರ್ ಲೈನ್ಸ್ ಸಂಸ್ಥೆ ಹೇಳಿದೆ.
ಇದನ್ನೂ ಓದಿ : ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 46ಕ್ಕೆ ಏರಿಕೆ, ಭಾರತ ಸಂತಾಪ