ನವದೆಹಲಿ: ಇಸ್ರೇಲ್ ಮತ್ತು ಪ್ಯಾಲೇಸ್ಟಿನಿಯನ್ ಗುಂಪು ಹಮಾಸ್ ನಡುವಿನ ಯುದ್ಧವು ಉಲ್ಬಣಗೊಳ್ಳುತ್ತಲೇ ಇರುವುದರಿಂದ, ಶುಕ್ರವಾರದ ಪ್ರಾರ್ಥನೆಗಳು ಮತ್ತು ಸಂಭಾವ್ಯ ಪ್ರತಿಭಟನೆಗಳ ದೃಷ್ಟಿಯಿಂದ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ, ಸೂಕ್ಷ್ಮ ಪ್ರದೇಶಗಳಲ್ಲಿ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿಯನ್ನು ಭಾರೀ ಬಲದೊಂದಿಗೆ ನಿಯೋಜಿಸಲಾಗುವುದು. ಇದರ ಹೊರತಾಗಿ, ಯಹೂದಿ ಧಾರ್ಮಿಕ ಸಂಸ್ಥೆಗಳು ಮತ್ತು ಇಸ್ರೇಲ್ ರಾಯಭಾರ ಕಚೇರಿಯಲ್ಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ತಿಳಿಸಿದೆ.
ದೇಶದಲ್ಲಿ ನೆಲೆಸಿರುವ ಇಸ್ರೇಲಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಏಜೆನ್ಸಿಗಳು ಇತರ ಕೆಲವು ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳಿಗೆ ಎಚ್ಚರಿಕೆ ನೀಡಿವೆ ಎಂದು ಮೂಲಗಳು ತಿಳಿಸಿವೆ.
ಅಮೆರಿಕ, ಯುಕೆ, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಹಲವು ದೇಶಗಳು ಇಸ್ರೇಲ್‍ನಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ದೃಷ್ಟಿಯಿಂದ ಸಂಭಾವ್ಯ ಯಹೂದಿ ಗುರಿಗಳು ಮತ್ತು ಪ್ಯಾಲೇಸ್ಟಿನಿಯನ್ ಪರ ಪ್ರತಿಭಟನಾಕಾರರ ಸುತ್ತಲೂ ಭದ್ರತೆಯನ್ನು ಹೆಚ್ಚಿಸಿದ ನಂತರ ದೆಹಲಿಯಲ್ಲೂ ಅದೇ ರೀತಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಗಾಜಾಪಟ್ಟಿ ಮೇಲೆ ಮುಗಿಬಿದ್ದ ಇಸ್ರೇಲ್ ಪಡೆ…ಹಮಾಸ್ ವಶದಲ್ಲಿದ್ದ 250 ಒತ್ತೆಯಾಳುಗಳ ರಕ್ಷಣೆ