ನವದೆಹಲಿ: ಕಳೆದ ಕೆಲ ದಿನಗಳಿಂದ ದೇಶದೆಲ್ಲೆಡೆ ವರುಣಾರ್ಭಟ ಜೋರಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ಉತ್ತರ ಭಾರತದಲ್ಲೂ ಮಳೆಯ ಅಬ್ಬರ ಜೋರಾಗಿದ್ದು ದೆಹಲಿ ಸೇರಿದಂತೆ ಸುತ್ತ ಮುತ್ತಲ ಪ್ರದೇಶದಲ್ಲಿ ಭಾರಿ ಮಳೆಗೆ ಯಮುನಾ ನದಿ ಉಕ್ಕಿ ಹಿರಿಯುತ್ತಿದೆ.
ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸಿದ್ದು, ಯಮುನಾ ನದಿಯ ನೀರಿನ ಮಟ್ಟ 205.33 ಮೀಟರ್‌ಗಳನ್ನು ದಾಟಿ ಅಪಾಯದ ಮಟ್ಟವನ್ನು ಮೀರಿ ಈಗ 206.24 ಮೀಟರ್ ಏರಿಕೆಯಾಗಿದೆ (ಗರಿಷ್ಠ ಮಟ್ಟ 207.49 ಮೀಟರ್) ಪರಿಣಾಮ ಸುತ್ತಮುತ್ತ ಭಾಗಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ತಿಳಿಸಿದೆ.
ಸೋಮವಾರ ಸಂಜೆ ಯಮುನಾ ಪ್ರವಾಹ ಪ್ರದೇಶದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲಾಯಿತು.
ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ಯಮುನಾ ನದಿಯ ಮೇಲಿರುವ ಹಳೆ ರೈಲು ಸೇತುವೆಯ ಮೇಲಿನ ರೈಲು ಸಂಚಾರವನ್ನು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್‌ಒ) ದೀಪಕ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ನಾವಿಲ್ಲ: ಮಣಿಪುರ ವಿಚಾರಕ್ಕೆ ಸುಪ್ರೀಂ ಕೋರ್ಟ್ ಸ್ಪಷ್ಟನೆ