Advertisement

ಪೆಟ್ರೋಲ್ ಮೇಲಿನ ವ್ಯಾಟ್ ದರ ಕಡಿತಗೊಳಿಸಿದ ದೆಹಲಿ ಸರ್ಕಾರ; ಲೀಟರ್ ಗೆ 8 ರೂ. ಇಳಿಕೆ

01:33 PM Dec 01, 2021 | Team Udayavani |

ನವದೆಹಲಿ: ದೆಹಲಿ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ವ್ಯಾಟ್(ಮೌಲ್ಯ ವರ್ಧಿತ ತೆರಿಗೆ) ಅನ್ನು ಶೇ.30ರಿಂದ 19.40ಕ್ಕೆ ಇಳಿಕೆ ಮಾಡಿರುವುದಾಗಿ ಬುಧವಾರ (ಡಿಸೆಂಬರ್ 01) ಘೋಷಿಸಿದ್ದು, ಇದರಿಂದ ವಾಹನ ಸವಾರರಿಗೆ ಮತ್ತಷ್ಟು ರಿಲೀಫ್ ಸಿಕ್ಕಂತಾಗಿದೆ.

Advertisement

ಇದನ್ನೂ ಓದಿ:ಭದ್ರತಾ ಪಡೆ ಎನ್ ಕೌಂಟರ್ ಗೆ ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲಿ

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸಚಿವ ಸಂಪುಟ ವ್ಯಾಟ್ ದರ ಕಡಿತ ಮಾಡುವ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 8 ರೂಪಾಯಿ ಇಳಿಕೆಯಾದಂತಾಗಿದೆ.

ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯವಾಗಲಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ. ವ್ಯಾಟ್ ದರ ಇಳಿಕೆ ಮಾಡಿದ್ದರಿಂದ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 95 ರೂಪಾಯಿಗೆ ಇಳಿಕೆಯಾಗಿದೆ.

ಕಳೆದ 27ದಿನಗಳಿಂದ ಇಂಧನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದಕ್ಕೂ ಮುನ್ನ ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 10 ರೂಪಾಯಿ ಇಳಿಕೆ ಮಾಡಿತ್ತು.

Advertisement

ದೆಹಲಿಯಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ ಲೀಟರ್ ಗೆ 103.97 ರೂಪಾಯಿಗೆ ಮಾರಾಟವಾಗುತ್ತಿತ್ತು. ಇದೀಗ 8 ರೂ. ಇಳಿಕೆಯಾಗಿದೆ. ಡೀಸೆಲ್ ಬೆಲೆ ಲೀಟರ್ ಗೆ 86.67 ರೂಪಾಯಿ. ವಾಣಿಜ್ಯ ನಗರಿ ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 109.98 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 94.14 ರೂಪಾಯಿ.

Advertisement

Udayavani is now on Telegram. Click here to join our channel and stay updated with the latest news.

Next