Advertisement

ದೆಹಲಿ: ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ, ಮೂವರು ಪೊಲೀಸರ ಬಲೆಗೆ

04:09 PM Apr 27, 2021 | Team Udayavani |

ನವದೆಹಲಿ: ಆಕ್ಸಿಜನ್ ಸಿಲಿಂಡರ್ ಗಳನ್ನು ಸಂಗ್ರಹಿಸಿ, ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ (ಏಪ್ರಿಲ್ 27) ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಬರಹ  ಪ್ರಕರಣ : ಇಬ್ಬರು ಅಪ್ರಾಪ್ತ ಬಾಲಕರ ಬಂಧನ

ಸೋಮವಾರ(ಏ.26) ದೆಹಲಿಯ ಘಿತ್ರೋನಿ ಮೆಟ್ರೋ ನಿಲ್ದಾಣದ ಬಳಿ ಆಕ್ಸಿಜನ್ ಸಿಲಿಂಡರ್ ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವ ವಿಷಯದ ಬಗ್ಗೆ ರಹಸ್ಯ ಮಾಹಿತಿಯೊಂದು ಲಭಿಸಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಖಚಿತವಾಗಿ ದೊರೆತ ಮಾಹಿತಿ ಆಧಾರದ ಮೇಲೆ ಕಾರ್ಯೋನ್ಮುಖರಾದ ಪೊಲೀಸರ ತಂಡ, ಘಿತ್ರೋನಿ ಮೆಟ್ರೋ ನಿಲ್ದಾಣದ ಸಮೀಪ ಮಾರುತಿ ಕಾರೊಂದನ್ನು ತಡೆದು ತಪಾಸಣೆ ನಡೆಸಿದ ವೇಳೆ ಎರಡು ಆಕ್ಸಿಜನ್ ಸಿಲಿಂಡರ್ ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಸಿಲಿಂಡರ್ ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ವರದಿ ವಿವರಿಸಿದೆ.

ಪೊಲೀಸರ ತಂಡ ಮತ್ತೂ ಇಬ್ಬರನ್ನು ಬಂಧಿಸಿದ್ದು, ಅವರಿಂದ ನಾಲ್ಕು ಆಕ್ಸಿಜನ್ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದು, ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next