Advertisement

ದಿಲ್ಲಿ ಟ್ರಾಫಿಕ್ ಪೊಲೀಸ್ ಗೆ ಕೋವಿಡ್ 19 ಸೋಂಕು, ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು

09:13 AM Apr 09, 2020 | Nagendra Trasi |

ನವದೆಹಲಿ: ದಿಲ್ಲಿಯ ಪೊಲೀಸ್ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಗೆ ಕೋವಿಡ್ 19 ಸೋಂಕು ತಗುಲಿರುವುದು ಪಾಸಿಟಿವ್ ವರದಿಯಲ್ಲಿ ಪತ್ತೆಯಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ (ಆಲ್ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್)ಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಸುದ್ದಿ ಮೂಲಗಳ ಪ್ರಕಾರ, ಎಎಸ್ ಐಗೆ ಕಳೆದ ವಾರ ಜ್ವರ, ಕೆಮ್ಮದ ಲಕ್ಷಣ ಕಾಣಿಸಿಕೊಂಡಿದ್ದು, ಮಂಗಳವಾರ ಬಂದ ವರದಿಯಲ್ಲಿ ಕೋವಿಡ್ 19 ವೈರಸ್ ಇದ್ದಿರುವುದು ಪತ್ತೆಯಾಗಿತ್ತು ಎಂದು ತಿಳಿಸಿದೆ.

ಸಬ್ ಇನ್ಸ್ ಪೆಕ್ಟರ್ ದಿಲ್ಲಿ ಟ್ರಾಫಿಕ್ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಎಎಸ್ ಐಗೆ ಕೋವಿಡ್ ಸೋಂಕು ಹೇಗೆ ಹರಡಿದೆ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ವರದಿ ಹೇಳಿದೆ.

ದಿಲ್ಲಿ ಪೊಲೀಸ್ ಸಿಬ್ಬಂದಿಗೆ ಕೋವಿಡ್ 19 ವೈರಸ್ ತಗುಲಿದ ಮೊದಲ ಪ್ರಕರಣ ಇದಾಗಿದೆ. ಎಎಸ್ ಐ ವಾಸವಾಗಿದ್ದ ಕಾಲೋನಿಯನ್ನು ಲಾಕ್ ಡೌನ್ ಮಾಡಲಾಗಿದ್ದು, ಎಷ್ಟು ಮಂದಿ ಸಂಪರ್ಕದಲ್ಲಿದ್ದರು ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next