ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಸಂಸದ, ಬಿಜೆಪಿಯ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಸೂಚಿಸಿದ್ದಾರೆ.
ಪತ್ರದ ಮೂಲಕ ಸೂಚನೆ ನೀಡಲಾಗಿದ್ದು, ಅದಕ್ಕೆ ಸಹಕರಿಸುವುದಾಗಿ ತೇಜಸ್ವಿ ತಿಳಿಸಿದ್ದಾರೆ.
“ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಗ್ಗೆ ದೆಹಲಿ ಸಿಎಂ ಕೇಜ್ರಿವಾಲ್ ವ್ಯಂಗ್ಯವಾಡಿದ್ದನ್ನು ಖಂಡಿಸಿ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಾ.30ರಂದು ಕೇಜ್ರಿವಾಲ್ ಮನೆ ಮುಂದೆ ದಾಂದಲೆ ನಡೆಸಿದ್ದರು.
ಇದನ್ನೂ ಓದಿ:ಲಂಚಬಾಕ ಚಾಲಕ: ಮಗನ ಶವವನ್ನು ತೊಡೆ ಮೇಲೆ ಇಟ್ಟು 90 ಕಿ.ಮೀ ಬೈಕ್ ನಲ್ಲೇ ಸಾಗಿದ ತಂದೆ
Related Articles
ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರು 26 ಜನರನ್ನು ವಿಚಾರಣೆ ನಡೆಸಿದ್ದಾರೆ. ಅದರಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ.