ನವದೆಹಲಿ:ಗಣರಾಜ್ಯೋತ್ಸವ ದಿನಾಚರಣೆ (ಜನವರಿ 26, 2021) ಸಂದರ್ಭದಲ್ಲಿ ರೈತರ ಟ್ರ್ಯಾಕ್ಟರ್ ರಾಲಿ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಜನವರಿ 27) 200 ಮಂದಿಯನ್ನು ವಶಕ್ಕೆ ಪಡೆದಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದ ಈ ನಗರದಲ್ಲಿ ‘100 ರೂ. ದಾಟಿದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ .?’
ಯಾರನ್ನು ವಶಕ್ಕೆ ತೆಗೆದುಕೊಂಡಿದ್ದೇವೊ ಅವರನ್ನು ಕೂಡಲೇ ಬಂಧಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದು, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 22 ಎಫ್ ಐಆರ್ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.
ಮಂಗಳವಾರ ರಾಜಧಾನಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 395 (ದರೋಡೆ), 397 (ಸುಲಿಗೆ, ಸಾವಿಗೆ ಕಾರಣವಾಗುವ ದಾಳಿ), 120 ಬಿ (ಕ್ರಿಮಿನಲ್ ಸಂಚು) ಅನ್ವಯ ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಘಟನೆ ಬಗ್ಗೆ ಕ್ರೈಂ ಬ್ರ್ಯಾಂಚ್ ತನಿಖೆ ನಡೆಸಲಿದೆ ಎಂದು ತಿಳಿಸಿರುವ ದೆಹಲಿ ಪೊಲೀಸರು, ಕೆಂಪುಕೋಟೆಯಲ್ಲಿ ನಡೆಸಿದ ಕೃತ್ಯ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.
ಹಿಂಸಾಚಾರದ ವೇಳೆ ಐಟಿಒ ಪ್ರದೇಶದಲ್ಲಿ ಹೆಚ್ಚುವರಿ ಡಿಸಿಪಿ ಮೇಲೆ ತಲ್ವಾರ್ ನಲ್ಲಿ ಹಲ್ಲೆ ನಡೆಸಲಾಗಿತ್ತು. ರೈತರ ಹಿಂಸಾಚಾರ ಘಟನೆಯಲ್ಲಿ 300ಕ್ಕೂ ಅಧಿಕ ಪೊಲೀಸರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ.