Advertisement
ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು ಮಾತನಾಡಿ, ರಾಹುಲ್ ಗಾಂಧಿಯವರು ತಮ್ಮ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಹಿಳೆಯರು ತಮ್ಮನ್ನು ಭೇಟಿಯಾದ ಬಗ್ಗೆ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿದ್ದರು ಎಂದು ಹೇಳಿದ್ದಾರೆ.ಪೊಲೀಸರು ಇಂತಹ ಘಟನೆಗಳ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು ಮತ್ತು ಅದಕ್ಕಾಗಿಯೇ ದೆಹಲಿ ಪೊಲೀಸರು ಕಾನೂನು ವಿಧಾನವನ್ನು ಅನುಸರಿಸಿದ್ದಾರೆ ಮತ್ತು ವಿವರಗಳಿಗಾಗಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಾರೆ ಎಂದರು.
Related Articles
Advertisement
ಭಾರತ್ ಜೋಡೋ ಯಾತ್ರೆಯ ವೇಳೆ “ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ” ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಅವರ ನಿವಾಸಕ್ಕೆ ತೆರಳಿದ್ದರು.
ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರ ಕ್ರಮವನ್ನು ಕಾಂಗ್ರೆಸ್ ಭಾನುವಾರ ಖಂಡಿಸಿ, ಇದು ರಾಜಕೀಯ ಸೇಡು ಮತ್ತು ಕಿರುಕುಳ”ದ ಕೆಟ್ಟ ಪ್ರಕರಣ ಎಂದು ಕರೆದಿದೆ, ರಾಜಕೀಯ ವಿರೋಧಿಗಳ ವಿರುದ್ಧ ಇಂತಹ ಪ್ರಕರಣಗಳನ್ನು ದಾಖಲಿಸುವ ಮೂಲಕ ಕೇಂದ್ರವು ತಪ್ಪು ನಿದರ್ಶನವನ್ನು ಸ್ಥಾಪಿಸುತ್ತಿದೆ ಎಂದು ಕಿಡಿ ಕಾರಿದೆ.