Advertisement

ತೀಸ್ ಹಜಾರಿ ಕೋರ್ಟ್ ವಕೀಲರ ಹಲ್ಲೆ ಖಂಡಿಸಿ ದೆಹಲಿ ಪೊಲೀಸರಿಂದ ಮೌನ ಪ್ರತಿಭಟನೆ

09:30 AM Nov 06, 2019 | Nagendra Trasi |

ನವದೆಹಲಿ: ಇತ್ತೀಚೆಗೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಸಂಕೀರ್ಣದ ಆವರಣದಲ್ಲಿ ಪೊಲೀಸರ ಮೇಲೆ ವಕೀಲರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಮಂಗಳವಾರ ದೆಹಲಿ ಪೊಲೀಸರು ಮತ್ತು ಕುಟುಂಬದ ಸದಸ್ಯರು ಪೊಲೀಸ್ ಕೇಂದ್ರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಪೊಲೀಸ್ ಸಮವಸ್ತ್ರ ಧರಿಸಿದ್ದು, ವಕೀಲರ ಹಲ್ಲೆಯನ್ನು ಖಂಡಿಸಿ ಕಪ್ಪು ಪಟ್ಟಿಯನ್ನು ಹಾಕಿಕೊಂಡು ಪೊಲೀಸ್ ಕೇಂದ್ರ ಕಚೇರಿ ಮುಂಭಾಗ ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.

ನೂರಾರು ಮಂದಿ ಪೊಲೀಸರು ತಮ್ಮ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ಯಾವುದೇ ಘೋಷಣೆ, ಯಾವುದೇ ಬೇಡಿಕೆಗಳನ್ನು ಇಡದೆ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯಾದ್ಯಂತ ನವೆಂಬರ್ 2ರಂದು ವಕೀಲರ ಗುಂಪು ಪೊಲೀಸರ ಮೇಲೆ ಹಲ್ಲೆ ನಡೆಸಿ ಹಿಂಸಾಚಾರ ನಡೆಸಿರುವುದನ್ನು ಖಂಡಿಸಿ ಈ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ನವೆಂಬರ್ 2ರಂದು ತೀಸ್ ಹಜಾರಿ ಕೋರ್ಟ್ ಸಂಕೀರ್ಣದ ಆವರಣದಲ್ಲಿ ಪಾರ್ಕಿಂಗ್ ವಿಚಾರದಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ನಡೆದ ವಾಗ್ವಾದ ಮಾರಾಮಾರಿಗೆ ಕಾರಣವಾಗಿತ್ತು. ಘಟನೆಯಲ್ಲಿ ಹೆಚ್ಚುವರಿ ಸಹಾಯಕ ಪೊಲೀಸ್ ಕಮೀಷನರ್ ಸೇರಿದಂತೆ 20 ಮಂದಿ ಪೊಲೀಸರು ಗಾಯಗೊಂಡಿದ್ದರು. ಅಲ್ಲದೇ ಎಂಟು ಮಂದಿ ವಕೀಲರು ಗಾಯಗೊಂಡಿರುವ ಘಟನೆ ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next