Advertisement

ಸಿಡಿಎಸ್ ಅನಿಲ್ ಚೌಹಾಣ್‌ಗೆ Z+ ಭದ್ರತೆ ಒದಗಿಸಿದ ದೆಹಲಿ ಪೊಲೀಸರು

07:49 PM Oct 03, 2022 | Team Udayavani |

ನವದೆಹಲಿ : ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಅನಿಲ್ ಚೌಹಾಣ್ ಅವರಿಗೆ Z+ ಭದ್ರತೆಯನ್ನು ಒದಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

Advertisement

ರಾಷ್ಟ್ರವು ಎದುರಿಸುತ್ತಿರುವ ಭವಿಷ್ಯದ ಭದ್ರತಾ ಸವಾಲುಗಳಿಗೆ ಸಶಸ್ತ್ರ ಪಡೆಗಳನ್ನು ಸಿದ್ಧಪಡಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕಾರ್ಯಗತಗೊಳಿಸುವ ಆದೇಶದೊಂದಿಗೆ ಚೌಹಾಣ್ ಶುಕ್ರವಾರ ಭಾರತದ ಮೂರೂ ಸೇನೆಗಳ ರಕ್ಷಣಾ ಸಿಬ್ಬಂದಿಯ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇದನ್ನೂ ಓದಿ : ವಿದೇಶಾಂಗ ಸಚಿವ ಜೈಶಂಕರ್ ಹೇಳಿಕೆಗೆ ಆಕ್ರೋಶ ವ್ಯಕ್ತ ಪಡಿಸಿದ ಪಾಕ್

“ಗೃಹ ಸಚಿವಾಲಯದ ಆದೇಶದ ಮೇರೆಗೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರಿಗೆ Z+ ಭದ್ರತೆಯನ್ನು ಒದಗಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ನಡೆದ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ದೇಶದ ಮೊದಲ ರಕ್ಷಣಾ ಸಿಬ್ಬಂದಿ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಸಾವನ್ನಪ್ಪಿದ ಒಂಬತ್ತು ತಿಂಗಳ ನಂತರ ಮಾಜಿ ಸೇನಾ ಕಮಾಂಡರ್ ಜನರಲ್ ಚೌಹಾಣ್ ಮಿಲಿಟರಿ ಕಮಾಂಡರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next