ನವದೆಹಲಿ: ಮಾರ್ಚ್ ತಿಂಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದ ವಿಚಾರದಲ್ಲಿ ಬಿಜೆಪಿ ಸಂಸದ ಹಾಗೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಜೂನ್ ತಿಂಗಳ ಕೊನೆಯ ವಾರದಲ್ಲಿ ಸುಮಾರು ಎರಡು ತಾಸುಗಳ ಕಾಲ ವಿಚಾರಣೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಸಂಸದರು, ಪ್ರತಿಭಟನೆ ವೇಳೆ ಅಲ್ಲಿದ್ದ ಭದ್ರತೆಯ ವಿಡಿಯೋಗಳನ್ನು ತೋರಿಸಿದ್ದಾರೆ ಎಂದು ತಿಳಿಸಲಾಗಿದೆ.
ಮಾರ್ಚ್ ತಿಂಗಳಲ್ಲಿ “ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಕೇಜ್ರಿವಾಲ್ ಕೊಟ್ಟ ಹೇಳಿಕೆಯನ್ನು ವಿರೋಧಿಸಿ, ಯುವ ಮೋರ್ಚಾ ಕಾರ್ಯಕರ್ತರು ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಮನೆಯ ಗೇಟಿಗೆ ಬಣ್ಣ ಬಳಿದು ಆಕ್ರೋಶ ಹೊರಹಾಕಿದ್ದರು.