ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರ ವಶದಿಂದ 2,000 ಜೀವಂತ ಕಾಟ್ರಿಡ್ಜ್ಗಳು ಸೇರಿದಂತೆ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳನ್ನು ರಾಷ್ಟ್ರ ರಾಜಧಾನಿಯ ಆನಂದ್ ವಿಹಾರ್ನಲ್ಲಿ ಎರಡು ಚೀಲ ಕಾಟ್ರಿಡ್ಜ್ಗಳೊಂದಿಗೆ ಬಂಧಿಸಲಾಗಿದೆ.ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಗಸ್ಟ್ 15 ರಂದು ಭಾರತ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.ಪೊಲೀಸರು ಗಸ್ತು ಮತ್ತು ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.
ಮೆಟ್ರೋ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು ಮತ್ತು ಮಾರುಕಟ್ಟೆಗಳು ಸೇರಿದಂತೆ ದೆಹಲಿಯ ಎಲ್ಲಾ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.