Advertisement

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

05:59 PM Jan 06, 2025 | Team Udayavani |

ಹೊಸದಿಲ್ಲಿ: ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲೂ ಮಹಿಳಾ ಮತದಾರರ ಗುರಿಯಾಗಿಸಿ ಹೆಚ್ಚಿನ ಮತ ಸೆಳೆಯಲು ಕಾಂಗ್ರೆಸ್‌  ಉಚಿತ ಯೋಜನೆಯ ಇಲ್ಲೂ ಮುಂದುವರಿಸಿದೆ. ಆಡಳಿತಾರೂಢ ಆಪ್‌ (ಆಮ್‌ ಆದ್ಮಿ ಪಾರ್ಟಿ) ಈಗಾಗಲೇ ಮಹಿಳಾ ಸಮ್ಮಾನ್‌ ಯೋಜನೆ ಪ್ರಸ್ತಾಪಿಸಿದ್ದು ಅದಕ್ಕೆ ಪ್ರತ್ಯಸ್ತ್ರವಾಗಿ ಕಾಂಗ್ರೆಸ್‌ ಈ ಯೋಜನೆ ಘೋಷಿಸಿದೆ.

Advertisement

ದಿಲ್ಲಿಯಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು ನೀಡುವ ‘ಪ್ಯಾರಿ ದೀದಿ ಯೋಜನೆ’ಯನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ಸೋಮವಾರ ಘೋಷಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಯೋಜನೆಯ ಘೋಷಿಸಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳೆಯರ ಆರ್ಥಿಕವಾಗಿ ಸಬಲೀಕರಣಗೊಳಿಸುವ ಗುರಿ ಹೊಂದಲಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರದ ಮೊದಲ ಸಚಿವ ಸಂಪುಟದ ಸಭೆಯಲ್ಲೇ ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಳವಡಿಸಿಕೊಂಡ ಗೃಹಜ್ಯೋತಿ, ಗೃಹಲಕ್ಷ್ಮೀ ಮಾದರಿಯಲ್ಲೇ ಈ ಯೋಜನೆ ದೆಹಲಿಯಲ್ಲಿ ಜಾರಿಯಾಗಲಿದೆ. ಇಂದು ನಾನು ಪ್ಯಾರಿ ದೀದಿ ಯೋಜನೆಗೆ ಚಾಲನೆ ನೀಡಲು ಇಲ್ಲಿಗೆ ಬಂದಿದ್ದೇನೆ. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವ ವಿಶ್ವಾಸವಿದೆ ಮತ್ತು ಹೊಸ ಸಚಿವ ಸಂಪುಟದ ಮೊದಲ ದಿನದಲ್ಲಿಯೇ ನಾವು ರಾಜಧಾನಿಯಲ್ಲಿರುವ ಪ್ರತಿ ಮಹಿಳೆಗೆ ತಿಂಗಳಿಗೆ 2,500 ರೂ. ಆರ್ಥಿಕ ನೆರವು ನೀಡುವ ಯೋಜನೆ ಜಾರಿಗೆ ತರುತ್ತೇವೆ’ ಎಂದು ಹೇಳಿದರು.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್, ಪಕ್ಷದ ದೆಹಲಿ ಉಸ್ತುವಾರಿ ಖಾಜಿ ನಿಜಾಮುದ್ದೀನ್ ಮತ್ತು ಇತರ ಹಿರಿಯ ನಾಯಕರು ಈ ಸಂದರ್ಭ ಉಪಸ್ಥಿತರಿದ್ದರು.


ಆಪ್‌ನಿಂದ ಮಹಿಳಾ ಸಮ್ಮಾನ್‌ ಯೋಜನಾ: 
ಎಎಪಿ ಮತ್ತು ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದರೂ, ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿವೆ. ಆಪ್‌  ಅಧಿಕಾರ ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದು ಆಪ್‌ ಕೂಡ 2024ರ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ಮಹಿಳಾ ಸಮ್ಮಾನ್‌ ಯೋಜನಾ ಘೋಷಿಸಿದ್ದು ಈಗಾಗಲೇ 22ಲಕ್ಷ ಮಹಿಳೆಯರು ಈ ಯೋಜನೆ ಲಾಭ ಪಡೆಯುತ್ತಿದ್ದಾರೆ. ಇದರ ಮೊತ್ತ 2,100 ರೂ. ಹೆಚ್ಚಿಸುವುದಾಗಿ ಆಪ್‌ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಭರವಸೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next