Advertisement

ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ 3,846 ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಇಳಿಕೆ

04:06 PM May 19, 2021 | Team Udayavani |

ನವದೆಹಲಿ:ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬುಧವಾರ 3,846 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದು ಏಪ್ರಿಲ್ 5ರ ನಂತರದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ತಿಳಿಸಿದೆ.

Advertisement

ಇದನ್ನೂ ಓದಿ:ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ : ರಾಜ್ಯ ಸರ್ಕಾರದ ಕೋವಿಡ್ ಪ್ಯಾಕೇಜ್ ಗೆ HDK ಆಕ್ರೋಶ

ದೆಹಲಿಯಲ್ಲಿ ಈಗ ಕೋವಿಡ್ ಸೋಂಕು ಲಕ್ಷಣ ಕಡಿಮೆಯಾಗುತ್ತಿರುವುದು ಕಂಡು ಬಂದಿದೆ. ಈ ನಿಟ್ಟಿನಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ.

ಕೋವಿಡ್ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24ಗಂಟೆಗಳಲ್ಲಿ 161 ಸಾವು ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ದಿನಂಪ್ರತಿ 300ಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿತ್ತು. ಇದು ಏಪ್ರಿಲ್ 18ರ ನಂತರ ದಾಖಲಾದ ಕಡಿಮೆ ಪ್ರಮಾಣದ ಸಾವಿನ ಸಂಖ್ಯೆಯಾಗಿದೆ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next