ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಮಂಕಿಪಾಕ್ಸ್ 5ನೇ ಪ್ರಕರಣ ಪತ್ತೆಯಾಗಿರುವುದಾಗಿ ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ಸುರೇಶ್ ಕುಮಾರ್ ಶನಿವಾರ (ಆಗಸ್ಟ್ 13) ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರೇಮ ಪ್ರಕರಣ; ತಿರಗಲು ಬಂದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಚೂರಿ ಇರಿತ: ಆರೋಪಿ ವಶಕ್ಕೆ
22 ವರ್ಷದ ಯುವತಿಯಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದ್ದು, ಆಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಈವರೆಗೆ ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾದಂತಾಗಿದೆ.
ಲೋಕನಾಯಕ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಯಲ್ಲಿ ಓರ್ವ ರೋಗಿ ದಾಖಲಾಗಿದ್ದು, ಆಕೆಯ ರಕ್ತದ ಮಾದರಿ ಪರೀಕ್ಷಿಸಿದಾಗ (ಮಂಕಿಪಾಕ್ಸ್ ಸೋಂಕು) ಪಾಸಿಟಿವ್ ಬಂದಿದೆ. ಸದ್ಯ ನಾಲ್ಕು ರೋಗಿಗಳು ದಾಖಲಾಗಿದ್ದು, ಒಬ್ಬರನ್ನು ಡಿಸ್ಚಾರ್ಜ್ ಮಾಡಲಾಗಿದೆ. ದೆಹಲಿಯಲ್ಲಿ ಒಟ್ಟು ಐದು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದೆ ಎಂದು ಎಎನ್ ಐ ವರದಿ ಮಾಡಿದೆ.
ಮಂಕಿಪಾಕ್ಸ್ ದೃಢಪಟ್ಟ ಯುವತಿ ಯಾವುದೇ ಪ್ರಯಾಣದ ಹಿಸ್ಟರಿ ಇತ್ತೀಚೆಗೆ ಹೊಂದಿಲ್ಲ. ಆದರೆ ಒಂದು ತಿಂಗಳ ಹಿಂದೆ ಪ್ರಯಾಣ ಮಾಡಿರುವುದಾಗಿ ತಿಳಿಸಿದ್ದಾಳೆ. ದೆಹಲಿಯಲ್ಲಿ ಜುಲೈ 24ರಂದು ಮೊದಲ ಮಂಕಿಪಾಕ್ಸ್ ಪ್ರಕರಣ ವರದಿಯಾಗಿತ್ತು.