ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 24ಗಂಟೆಗಳಲ್ಲಿ ದಾಖಲೆಯ 10,489 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 308 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆ ಗುರುವಾರ(ಮೇ 13) ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ತಿಳಿಸಿದೆ.
ಇದನ್ನೂ ಓದಿ:ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ
ಈ ಅವಧಿಯಲ್ಲಿ 15,189 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿರುವುದಾಗಿ ವರದಿ ಹೇಳಿದೆ. ದೆಹಲಿಯಲ್ಲಿ ಶೇ.14.24ರಷ್ಟು ಪಾಸಿಟಿವ್ ರೇಟ್ ಇದ್ದು, ಈ ತಿಂಗಳಲ್ಲಿ ಅತೀ ಕಡಿಮೆ ಪ್ರಮಾಣದಲ್ಲಿ ಸೋಂಕು ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಏಪ್ರಿಲ್ 10ರ ನಂತರ ಕೋವಿಡ್ ಸೋಂಕು ಪ್ರಕರಣದಲ್ಲಿ ಇಳಿಮುಖವಾಗುತ್ತಿದ್ದು, ಬುಧವಾರ ದೆಹಲಿಯಲ್ಲಿ 13,287 ಕೋವಿಡ್ ಸೋಂಕು ಪ್ರಕರಣ ವರದಿಯಾಗಿತ್ತು. 300 ಜನರು ಕೋವಿಡ್ ಸೋಂಕಿನಿಂದ ಸಾವಿಗೀಡಾಗಿದ್ದರು.
ದೆಹಲಿಯಲ್ಲಿ ಒಟ್ಟು ಕೋವಿಡ್ ಸೋಂಕಿತರ ಪ್ರಕರಣ 13,72,475ಕ್ಕೆ ಏರಿಕೆಯಾಗಿದೆ. ಈವರೆಗೆ 12,74,140 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, 20,618 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.