ದೆಹಲಿ:ದಿಲ್ಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ ಕೇಜ್ರಿವಾಲ್ ಹಾಗೂ ಬಿಜೆಪಿ, ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣವಾಗಿದ್ದ 272(2 ವಾರ್ಡ್ ಗಳಿಗೆ ಚುನಾವಣೆ ನಡೆಯಬೇಕಿದೆ) ಸದಸ್ಯಬಲದ ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ 180 ಸ್ಥಾನ ಪಡೆದು ಸ್ಪಷ್ಟ ಬಹುಮತ ಪಡೆದಿದೆ. ಆಡಳಿತಾರೂಢ ಆಪ್ ಸರ್ಕಾರ ಭಾರೀ ಹಿನ್ನಡೆ ಅನುಭವಿಸಿದೆ.
ದೆಹಲಿಯ ಮೂರು ಪಾಲಿಕೆಯಲ್ಲೂ ಬಿಜೆಪಿ ಬಹುಮತ ಪಡೆಯುವ ಮೂಲಕ ಬಿಜೆಪಿ ಮತ್ತೆ ದೆಹಲಿ ಮಹಾನಗರ ಪಾಲಿಕೆಯ ಗದ್ದುಗೆ ಏರಿದೆ. ಏತನ್ಮಧ್ಯೆ ಎಂಸಿಡಿ ಚುನಾವಣಾ ಫಲಿತಾಂಶ ಬಹಿರಂಗವಾಗುತ್ತಿದ್ದಂತೆಯೇ ಇದು ಮೋದಿ ಅಲೆ ಅಲ್ಲ, ಇವಿಎಂ ಅಲೆ ಎಂದು ಆಪ್ ಪ್ರತಿಕ್ರಿಯೆ ನೀಡಿದ್ದು, ಇವಿಎಂ ವಿರುದ್ಧ ದೇಶಾದ್ಯಂತ ಆಂದೋಲನ ನಡೆಸುವುದಾಗಿ ತಿಳಿಸಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 7 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಬಾಚಿಕೊಂಡಿತ್ತು. 2015ರ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್ ಜಯಭೇರಿ ಬಾರಿಸಿತ್ತು. ಆದರೆ 2017ರ ದಿಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೇಜ್ರಿವಾಲ್ ಜನಪ್ರಿಯತೆ ಕಡಿಮೆಯಾಗಿದೆ ಎಂಬುದಕ್ಕೆ ಫಲಿತಾಂಶವೇ ದಿಕ್ಸೂಚಿಯಾಗಿದೆ ಎಂದು ರಾಜಕೀಯ ಪಂಡಿತರ ವಿಶ್ಲೇಷಣೆಯಾಗಿದೆ.
ದೆಹಲಿ ಮಹಾನಗರ ಪಾಲಿಕೆ ಒಟ್ಟು ಸ್ಥಾನ: 272
2 ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ
ಭಾರತೀಯ ಜನತಾ ಪಕ್ಷ : 180
ಆಮ್ ಆದ್ಮಿ ಪಕ್ಷ : 45
ಕಾಂಗ್ರೆಸ್ : 35
ಮ್ಯಾಜಿಕ್ ನಂಬರ್ :137