Advertisement

ದೆಹಲಿ ಗಲಭೆ: ಇಬ್ಬರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್

06:45 PM Jun 10, 2021 | Team Udayavani |

ನವದೆಹಲಿ: ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ಗುರುವಾರ (ಜೂನ್ 10) ವಜಾಗೊಳಿಸಿದೆ. ಇಬ್ಬರ ವಿರುದ್ಧ ಗಂಭೀರ ಆರೋಪ ಇರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

Advertisement

ಇದನ್ನೂ ಓದಿ:ಪೆಟ್ರೋಲ್, ಡಿಸೇಲ್ ದರ ಹೆಚ್ಚಿಸಲು ಬಿಜೆಪಿ ನಾಯಕರಿಗೆ ನಾಚಿಕೆಯಾಗಲ್ವೇ : ಸಿದ್ದು ಕಿಡಿ

ವೆಯ್ಟರ್ ದಿಲ್ಬರ್ ನೇಗಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಾದ ರಶೀದ್ ಮತ್ತು ಶೋಯಿಬ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೆಚ್ಚುವರಿ ಸೆಷನ್ಸ್ ಜಡ್ಜ್ ವಿನೋದ್ ಯಾದವ್ ತಿರಸ್ಕರಿಸಿರುವುದಾಗಿ ವರದಿ ತಿಳಿಸಿದೆ. ಸ್ಥಳೀಯ ಸ್ವೀಟ್ ಅಂಗಡಿಯಲ್ಲಿ ನೇಗಿಯ ಸುಟ್ಟು ಹೋದ ಶವ ಪತ್ತೆಯಾಗಿತ್ತು.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್, ಪೊಲೀಸರು ಚಾರ್ಚ್ ಶೀಟ್, ಸಿಸಿಟಿವಿ ಫೂಟೇಜ್ ಮತ್ತು ವಿಡಿಯೋ ಫೂಟೇಜ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿರುವುದಾಗಿ ವರದಿ ಹೇಳಿದೆ.

ಮೃತ ದಿಲ್ಬರ್ ನೇಗಿ ಗೋದಾಮಿನಲ್ಲಿ ಇದ್ದಾಗಲೇ ಬೆಂಕಿ ಹಚ್ಚಿರುವುದು ಸಿಸಿಟಿವಿ ಫೂಟೇಜ್ ನಲ್ಲಿ ದಾಖಲಾಗಿದೆ ಎಂದು ಕೋರ್ಟ್ ತಿಳಿಸಿದೆ. ಇಬ್ಬರು ಆರೋಪಿಗಳು ಸಿಸಿಟಿವಿ ಫೂಟೇಜ್ ನಲ್ಲಿ ತಮ್ಮ ಕೈಯಲ್ಲಿ ಕಬ್ಬಿಣದ ಸರಳುಗಳನ್ನು ಹಿಡಿದುಕೊಂಡಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ ಎಂದು ಕೋರ್ಟ್ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next