Advertisement

ಬಂಧನ ಭೀತಿಯಿಂದ ಬಚಾವಾದ ಡಿಕೆ ಶಿವಕುಮಾರ್: ಜಾಮೀನು ನೀಡಿದ ದೆಹಲಿ ಕೋರ್ಟ್

04:54 PM Aug 02, 2022 | Team Udayavani |

ಬೆಂಗಳೂರು: ಕೇಂದ್ರ ತನಿಖಾ ಸಂಸ್ಥೆಗಳ ಇಕ್ಕಳದಲ್ಲಿ ಸಿಲುಕಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಈಗ ಬಂಧನ ಭೀತಿಯಿಂದ ಬಚಾವ್ ಆಗಿದ್ದು, ದೆಹಲಿ ವಿಶೇಷ  ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Advertisement

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಮತ್ತು ಅವರ ಸಹಚರರನ್ನು ಇ.ಡಿ 2018ರಲ್ಲಿ ಬಂಧಿಸಿತ್ತು. ಅನಾರೋಗ್ಯ ಕಾರಣ ನೀಡಿ ಡಿಕೆ ಶಿವಕುಮಾರ್ ಹಾಗೂ ಸಹ ಆರೋಪಿಗಳು ತಾತ್ಕಾಲಿಕ ಜಾಮೀನು ಪಡೆದಿದ್ದರು.

ಜಾಮೀನು ವಿಸ್ತರಣೆ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಕಾಸ್ ಧುಲ್ ಅವರು ಜುಲೈ 30 ರಂದು ಎರಡೂ ಕಡೆಯ ವಿಚಾರಣೆಯ ನಂತರ ಆದೇಶವನ್ನು ಕಾಯ್ದಿರಿಸಿದ್ದರು. ಖುದ್ದು ಉಪಸ್ಥಿತಿಗೆ ಸೂಚಿಸಿದ್ದರು. ಹೀಗಾಗಿ ಬಂಧನ ಸಾಧ್ಯತೆ ಇದೆ ಎಂಬ ಚರ್ಚೆ ಪ್ರಾರಂಭವಾಗಿತ್ತು. ಆದರೆ ಶಿವಕುಮಾರ್ ಮತ್ತು ಉದ್ಯಮಿ ಸಚಿನ್ ನಾರಾಯಣ್, ಶರ್ಮಾ ಟ್ರಾನ್ಸ್‌ಪೋರ್ಟ್ ಮಾಲೀಕ ಸುನೀಲ ಕುಮಾರ್ ಶರ್ಮಾ, ಕರ್ನಾಟಕ ಭವನದ ಉದ್ಯೋಗಿ ಆಂಜನೇಯ ಮತ್ತು ರಾಜೇಂದ್ರ ಸೇರಿದಂತೆ ಇತರ ಆರೋಪಿಗಳ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿವರ್ತಿಸಲಾಗಿದೆ.

ಇದನ್ನೂ ಓದಿ:ಮೊಟ್ಟೆ ಕೊಡಲೇಬೆಕೆಂದರೆ… ಮಿಡ್ ಡೇ ಮೀಲ್ ವಿಚಾರವಾಗಿ ಸಲಹೆ ನೀಡಿದ ತೇಜಸ್ವಿನಿ ಅನಂತ್ ಕುಮಾರ್

ಹೀಗಾಗಿ ಬಂಧನ ಭೀತಿಯಿಂದ ಶಿವಕುಮಾರ್ ಬಚಾವ್ ಆಗಿದ್ದಾರೆ. ಒಂದೆಡೆ ಪಕ್ಷದ ಒಳ ರಾಜಕಾರಣ, ಇನ್ನೊಂದೆಡೆ ವ್ಯಾಜ್ಯದಿಂದ ಬಳಲಿದ್ದ ಡಿಕೆ ಶಿವಕುಮಾರ್ ಈಗ ನಿರಾಳರಾಗಿದ್ದಾರೆ. ದೇಶ ಬಿಟ್ಟು ಹೋಗಬಾರದು, ಸಾಕ್ಷ್ಯ ನಾಶ ಮಾಡಬಾರದು ಹಾಗೂ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next