Advertisement

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

01:17 AM Dec 23, 2024 | Team Udayavani |

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸ ದಿ ಲ್ಲಿಯಲ್ಲಿ ನ.28ರಂದು 3 ಶಾಲೆಗಳಿಗೆ ಬಂದಿದ್ದ ಹುಸಿ ಇಮೇಲ್‌ ಬಾಂಬ್‌ ಬೆದರಿಕೆ ಹಿಂದೆ ವಿದ್ಯಾರ್ಥಿಗಳೇ ಇದ್ದಾರೆ ಎಂಬ ಅಂಶವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಶಾಲೆಯಲ್ಲಿ ಪರೀಕ್ಷೆ ಇದ್ದ ಕಾರಣ ಅದನ್ನು ಮುಂದೂಡಿಕೆಯಾಗಬೇಕು ಮತ್ತು ರಜೆ ಸಿಗಬೇಕು ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಈ ಹಿಂದೆ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದ ಸಮಯದಲ್ಲಿ ಶಾಲೆಗಳಿಗೆ ರಜೆ ಕೊಟ್ಟಿದ್ದರು. ಹೀಗಾಗಿ ಮತ್ತೂಮ್ಮೆ ರಜೆ ಗಿಟ್ಟಿಸಿ ಕೊಳ್ಳುವುದಕ್ಕಾಗಿ ಶಾಲೆಗಳಿಗೆ ಇ-ಮೇಲ್‌ ಮಾಡಿದ್ದಾಗಿ ಇಬ್ಬರು ಮಕ್ಕಳು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next