Advertisement
ಅವರು ತಮ್ಮ ಎರಡು ದಿನಗಳ ದೆಹಲಿ ಪ್ರವಾಸದಿಂದ ಹಿಂದಿರುಗಿದ ನಂತರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಧಾನಮಂತ್ರಿಯವರು ಕಳೆದ ನೂರು ದಿನಗಳಲ್ಲಿ ಕೈಗೊಂಡ ನಿರ್ಣಯಗಳು, ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಹಲವು ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದರು. ವಿಶೇಷವಾಗಿ ಕೆಟಿಪಿಪಿ ಕಾಯ್ದೆ ತಿದ್ದುಪಡಿ ಕುರಿತು ಮಾಹಿತಿಯನ್ನು ಇತರ ರಾಜ್ಯಗಳೊಂದಿಗೆ ಹಂಚಿಕೊಂಡು ಅನುಷ್ಠಾನಗೊಳಿಸಲು ಸಲಹೆ ನೀಡುವುದಾಗಿ ತಿಳಿಸಿದರು.
Related Articles
Advertisement
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಸುಮಾರು 2100 ಕೋಟಿ ರೂ ಬಾಕಿ ಇರುವ ಕುರಿತು ಚರ್ಚಿಸಲಾಗಿದ್ದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಈ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.