Advertisement

ದಿಲ್ಲಿ ಪ್ರವಾಸ ಯಶಸ್ವಿ, ಸಂಪುಟ ವಿಸ್ತರಣೆ ಬಗ್ಗೆ ಇಂದೇ ಅಂತಿಮ ನಿರ್ಧಾರ: ಬಿ ಎಸ್ ಯಡಿಯೂರಪ್ಪ

12:56 PM Sep 19, 2020 | keerthan |

ಹೊಸದಿಲ್ಲಿ: ನನ್ನ ಈ ಬಾರಿಯ ದಿಲ್ಲಿ ಪ್ರವಾಸ ಅತ್ಯಂತ ಯಶಸ್ವಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಇತರ ಕೇಂದ್ರ ಸಚಿವರುಗಳು ಕೂಡಾ ರಾಜ್ಯದ ಅಭಿವೃದ್ದಿ ಬೇಡಿಕೆಗಳಿಗೆ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ವೆಂಕಯ್ಯ ನಾಯ್ಡು ಅವರ ಜೊತೆ ರಾಜ್ಯದ ಅಭಿವೃದ್ದಿಯ ಬಗ್ಗೆ ಮಾತುಕತೆ ನಡೆಸಿದ್ದೇನೆ. ಇಂದು ಅವಸರದ ಭೇಟಿಯಾಗಿತ್ತು. ಮುಂದಿನ ಬಾರಿ ಬಂದಾಗ ಇನ್ನೂ ಹೆಚ್ಚು ಸಮಯ ಕುಳಿತು ಚರ್ಚೆ ನಡೆಸುವ ಇಂಗಿತವನ್ನು ಅವರೂ ವ್ಯಕ್ತಪಡಿಸಿದ್ದಾರೆ ಎಂದರು.

ಸಂಪುಟ ವಿಸ್ತರಣೆ ಇಂದೇ ಅಂತಿಮ
ರಾಜ್ಯದ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಜೊತೆಗೆ ಮಾತುಕತೆ ನಡೆಸಿದ್ದೇನೆ. ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ವಿಸ್ತರಣೆಯ ಬಗ್ಗೆ ಇಂದೇ ಸೂಚನೆ ನೀಡಬಹುದು ಎಂದರು.

ಇದನ್ನೂ ಓದಿ: ಅಭಿಮತ: ಸಿಂಗಾಪೂರ್‌ ನಿರುದ್ಯೋಗ ಸಮಸ್ಯೆ ಭಾರತೀಯರ ಮೇಲೆ ಜನರ ಮುನಿಸು!

ಯಾರೆಲ್ಲಾ ಕ್ಯಾಬಿನೆಟ್ ಗೆ ಸೇರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಿಎಸ್ ವೈ, ಪ್ರಧಾನಿ ಮತ್ತು ರಾಷ್ಟ್ರೀಯ ಅಧ್ಯಕ್ಷರು ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

Advertisement

ವಿಧಾನಸಭೆ ಕಲಾಪಕ್ಕೂ ಮೊದಲು ಸಂಪುಟ ವಿಸ್ತರಣೆ ಮಾಡುವ ಅಪೇಕ್ಷೆ ನನಗಿದ್ದು, ವರಿಷ್ಠರ ನಿರ್ಧಾರದ ನಂತರ ಅಂತಿಮ ನಿರ್ಧಾರ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next