ನವದೆಹಲಿ: ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಸೋಮವಾರ (ಫೆ.28)ದಿಂದ ರಾತ್ರಿ ಕರ್ಫ್ಯೂ ಸೇರಿದಂತೆ ಎಲ್ಲಾ ರೀತಿಯ ನಿರ್ಬಂಧಗಳನ್ನು ತೆರವುಗೊಳಿಸಿರುವುದಾಗಿ ದೆಹಲಿ ವಿಪತ್ತು ನಿರ್ವಹಣಾ ಮಂಡಳಿ (ಡಿಡಿಎಂಎ) ತಿಳಿಸಿದೆ.
ಇದನ್ನೂ ಓದಿ:ಮಗಳ ಮೇಲೆ ಅತ್ಯಾಚಾರ: ತಂದೆಗೆ 10 ವರ್ಷ ಜೈಲು ಶಿಕ್ಷೆ ನೀಡಿದ ಹೈಕೋರ್ಟ್
ಕೋವಿಡ್ ಸೋಂಕು ಪ್ರಕರಣ ತೀವ್ರವಾಗಿ ಇಳಿಕೆಯಾದ ನಿಟ್ಟಿನಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ತಜ್ಞರು, ಅಧಿಕಾರಿಗಳು ಉಪಸ್ಥಿತರಿದ್ದು, ಕೋವಿಡ್ ನಿರ್ಬಂಧ ರದ್ದುಪಡಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಡಿಡಿಎಂಎ ತಿಳಿಸಿದೆ.
ದೆಹಲಿ ವಿಪತ್ತು ನಿರ್ವಹಣಾ ಮಂಡಳಿಯ ಸಭೆಯಲ್ಲಿ ಕೋವಿಡ್ ಸ್ಥಿತಿಗತಿಯ ಬಗ್ಗೆ ಪುನರ್ ವಿಮರ್ಶೆ ನಡೆಸಲಾಗಿತ್ತು. ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ, ಸಾವಿನ ಪ್ರಮಾಣ ತೀವ್ರಗತಿಯಲ್ಲಿ ಇಳಿಕೆಯಾದ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವಿವರಿಸಿದೆ.
ಕೋವಿಡ್ ನಿರ್ಬಂಧದಿಂದ ಉದ್ಯೋಗ ಕಳೆದುಕೊಳ್ಳುತ್ತಿದ್ದು, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಡಿಡಿಎಂಎ ತಿಳಿಸಿದೆ. ಈಗಾಗಲೇ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ, ಮೆಟ್ರೋ, ರೈಲುಗಳಲ್ಲಿನ ಶೇ.50ರ ಮಿತಿ, ಮಲ್ಟಿಪ್ಲೆಕ್ಸ್, ಚಿತ್ರಮಂದಿರ ಬಂದ್ ನಿರ್ಧಾರವನ್ನು ಹಿಂಪಡೆಯಲಾಗಿತ್ತು.