ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾಕಾರರ ನಡುವೆ ನಡೆದ ಹಿಂಸಾಚಾರದಲ್ಲಿ 76 ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ದಿಲ್ಲಿಯ ಅತೀ ಸೂಕ್ಷ್ಮ ಪ್ರದೇಶಗಳಾದ ಜಾಫ್ರಾಬಾದ್, ಮೌಜ್ ಪುರ್, ಬಾಬರ್ ಪುರ್, ಗೋಕುಲ್ ಪುರಿ, ಜೋಹ್ರಿ ಎನ್ ಕ್ಷೇವ್ ಮ್ತು ಶಿವ ವಿಹಾರ್ ಪ್ರದೇಶಗಳಲ್ಲಿ ಭಾರೀ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ ಎಂದು ವರದಿ ವಿವರಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿಲ್ಲಿ ಭೇಟಿ ವೇಳೆ ಹಿಂಸಾಚಾರ ನಡೆಸುವ ಹುನ್ನಾರ ನಡೆಸಿರುವುದಾಗಿ ದಿಲ್ಲಿ ಸರ್ಕಾರದ ಮೂಲಗಳು ಆರೋಪಿಸಿರುವುದಾಗಿ ವರದಿ ತಿಳಿಸಿದೆ. ಸೋಮವಾರ ನಡೆದ ಹಿಂಸಾಚಾರದಲ್ಲಿ ಹೆಡ್ ಕಾನ್ಸ್ ಟೇಬಲ್ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿತ್ತು.
ದಿಲ್ಲಿಯಲ್ಲಿನ ಹಿಂಸಾಚಾರ ಘಟನೆ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ತುರ್ತು ಸಭೆ ಕರೆದು ಮಾತುಕತೆ ನಡೆಸಿರುವುದಾಗಿ ವರದಿ ತಿಳಿಸಿದೆ.