Advertisement

ದೆಹಲಿ ಗಲಭೆ ಪ್ರಕರಣದ ಆರೋಪಿ ಶಾರ್ಜಿಲ್ ಇಮಾಮ್ ಗೆ ಕೋವಿಡ್ 19 ದೃಢ

11:48 PM Jul 21, 2020 | Nagendra Trasi |

ನವದೆಹಲಿ: ದೆಹಲಿ ಹಿಂಸಾಚಾರದ ಆರೋಪಿ, ಜೆಎನ್ ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಗೆ ಕೋವಿಡ್ 19 ಸೋಂಕು ತಗುಲಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ದೆಹಲಿ ವಿಶೇಷ ಪೊಲೀಸ್ ತಂಡ ರಾಜಧಾನಿಗೆ ಕರೆತಂದ ವೇಳೆ ಪರೀಕ್ಷೆಗೆ ಒಳಪಡಿಸಿದ್ದರು, ಈ ಸಂದರ್ಭದಲ್ಲಿ ಕೋವಿಡ್ 19 ಇದ್ದಿರುವುದು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ.

Advertisement

ಸಿಎಎ ಮತ್ತು ಎನ್ ಆರ್ ಸಿ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಇಮಾಮ್ ಉದ್ರೇಕಕಾರಿ ಭಾಷಣ ಮಾಡಿರುವುದಲ್ಲದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸಿರುವುದಾಗಿ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಮಾಮ್ ಗುವಾಹಟಿ ಜೈಲಿನಲ್ಲಿ ಇದ್ದಿರುವುದಾಗಿ ವರದಿ ವಿವರಿಸಿದೆ.

ಪ್ರಕರಣದಲ್ಲಿ ಮೂರು ತಿಂಗಳ ಕಾಲ ದೆಹಲಿ ಪೊಲೀಸರ ವಶಕ್ಕೆ ಒಪ್ಪಿಸಿರುವ ವಿಚಾರಣಾಧೀನ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಇಮಾಮ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದು, ಆ ಅರ್ಜಿಯನ್ನು ಜುಲೈ 10ರಂದು ವಜಾಗೊಳಿಸಿತ್ತು.

ತನಿಖೆಯನ್ನು ಮುಂದುವರಿಸಲು ಯಾವುದೇ ತೊಂದರೆ ಇಲ್ಲ. ಇದರಿಂದಾಗಿ ಅರ್ಜಿದಾರ(ಇಮಾಮ್) ತಮಗೆ ಸಿಕ್ಕ ಅವಕಾಶ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಕೋರ್ಟ್ ನಿರ್ಧಾರಕ್ಕೆ ಬಂದಿದ್ದು, ಅರ್ಜಿಯನ್ನು ತಿರಸ್ಕರಿಸಿರುವುದಾಗಿ 54 ಪುಟಗಳ ವರದಿಯಲ್ಲಿ ನ್ಯಾಯಾಲಯ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next