Advertisement
ಜಮ್ಮು ಕಾಶ್ಮೀರದ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆದ ಸರ್ವ ಪಕ್ಷಗಳ ಸಭೆಯ ಬಳಿಕ ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಶಾ, ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ಕೇಂದ್ರವು ಬದ್ಧವಾಗಿದೆ. ಡಿಲಿಮಿಟೇಶನ್ ಪ್ರಕ್ರಿಯೆ ಮತ್ತು ಶಾಂತಿಯುತ ಚುನಾವಣೆಗಳು ರಾಜ್ಯತ್ವವನ್ನು ಪುನಃಸ್ಥಾಪಿಸುವಲ್ಲಿ ಪ್ರಮುಖವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಕೋವಿಡ್ ನಿಂದ ತೊಂದರೆಗೊಳಗಾದ 3500 ಕ್ರೀಡಾಪಟುಗಳಿಗೆ ಡ್ರೀಮ್ ಸ್ಪೋರ್ಟ್ಸ್ ನೆರವು ಜಮ್ಮು ಮತ್ತು ಕಾಶ್ಮೀರದ ಇಂದಿನ ಸಭೆಯನ್ನು ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆಸಲಾಯಿತು. ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬಲಪಡಿಸಲು ಒತ್ತು ನೀಡಲಾಯಿತು, ಎಂದು ಅವರು ಅಭಿಪ್ರಾಯ ಪಟ್ಟರು.
Related Articles
Advertisement
ಇದನ್ನೂ ಓದಿ : ಜಮ್ಮು ಕಾಶ್ಮೀರಕ್ಕೆ ಶೀಘ್ರ ರಾಜ್ಯ ಸ್ಥಾನಮಾನ