ಶಿವಮೊಗ್ಗ: ನಗರದಲ್ಲಿ ಹಾಗೂ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಸೋಂಕನ್ನು ತಡೆಗ ಟ್ಟುವ ನಿಟ್ಟಿನಲ್ಲಿ ಆಯುಷ್ ಇಲಾಖೆಯ ಔಷಧಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಸಚಿವ ಕೆ.ಎಸ್. ಈಶ್ವರಪ್ಪ ಸೂಚನೆ ನೀಡಿದರು.
ತಮ್ಮ ಕಚೇರಿಯಲ್ಲಿ ಆಯುಷ್ ಇಲಾಖೆಯ ವೈದ್ಯರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಮನುಷ್ಯರಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಮುಂದಾಗಬೇಕೆಂದು ತಿಳಿಸಿದರು.
ಆಯುರ್ವೇದ ಔಷಧವು ಕೋವಿಡ್ ದಂತಹ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬ ಮಾಹಿತಿ ಇದೆ. ಆದ್ದರಿಂದ ಆಯುಷ್ ಇಲಾಖೆ ಇಂತಹ ಸಂದಿಗª ಸಂದರ್ಭದಲ್ಲಿ ಜನಸಾಮಾನ್ಯರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತಮ್ಮ ವಿಭಾಗದ ಔಷಧಗಳನ್ನು ವಿತರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಆಯುಷ್ ಅಧಿಕಾರಿ ಡಾ| ಪುಷ್ಪಾ ಮಾತನಾಡಿ, ಈಗಾಗಲೇ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಪಂ ಮಟ್ಟದಲ್ಲಿ ನಮ್ಮ ಇಲಾಖೆ ವತಿಯಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔಷ ಧಗಳನ್ನು ವಿತರಿಸಲಾಗುತ್ತಿದೆ ಎಂದರು.
ಇದೇ ಕಾರ್ಯವನ್ನು ಬೇರೆ ಬೇರೆ ಹಂತದಲ್ಲಿಯೂ ಕೂಡಾ ಮಾಡಲು ಯೋಜನೆ ರೂಪಿಸಲಾಗಿದೆ. ಶೀಘ್ರದಲ್ಲೇ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು. ರಾಜ್ಯ ಸರ್ಕಾರದ ಸೂಚನೆಯಂತೆ ಈಗಾಗಲೇ ಕೋವಿಡ್ ವಾರಿಯರ್ಸ್‌ಗಳಿಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಔಷ ಧಗಳನ್ನು ನೀಡಲಾಗಿದೆ ಎಂದರು. ಸಭೆಯಲ್ಲಿ ಡಾ| ವೀರಣ್ಣ, ಡಾ| ಲಿಂಗರಾಜು, ಡಾ| ಕೊಟ್ರೇಶ್ ಮತ್ತಿತರರು ಇದ್ದರು.