Advertisement
ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ರವಿವಾರ ಬೆಳಗ್ಗೆ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಪೌತಿಖಾತೆ ಆಂದೋಲನದಲ್ಲಿ ಖಾತೆ ಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
Related Articles
ಜಡಿಗೇನಹಳ್ಳಿಯಲ್ಲಿ ಶನಿವಾರ ಗ್ರಾಮವಾಸ್ತವ್ಯ ಮಾಡಿದ್ದ ಸಚಿವ ಆರ್.ಅಶೋಕ ಅವರು ರವಿವಾರ ಬೆಳಗ್ಗೆ ಗ್ರಾಮದ ಪರಿಶಿಷ್ಟ ಜಾತಿಯ ಗಿರಿಜಮ್ಮ ಹಾಗೂ ಮುನಿಯಪ್ಪ ದಂಪತಿಯ ಮನೆಯಲ್ಲಿ ಉಪಾಹಾರ ಸೇವಿಸಿದರು. ಕುಟುಂಬದಲ್ಲಿರುವ ಸದಸ್ಯರ ಮಾಹಿತಿ ಪಡೆದ ಸಚಿವರು ಗ್ರಾಮದಲ್ಲಿ ಗುರುತಿಸಲಾಗಿರುವ ಸರಕಾರಿ ನಿವೇಶನಗಳಲ್ಲಿ ಎರಡು ನಿವೇಶನಗಳನ್ನು ಒದಗಿಸುವಂತೆ ಸೂಚಿಸಿದರು. ಉಪಾಹಾರದ ಬಳಿಕ ಮನೆಯ ಆವರಣದಲ್ಲಿ ಸ್ವಲ್ಪಹೊತ್ತು ಕುಳಿತು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
Advertisement
ಆರೋಗ್ಯಯುತ ಜೀವನಕ್ಕೆ ಯೋಗಾಸನ ರಹದಾರಿರವಿವಾರ ಬೆಳಗ್ಗೆ ವಿದ್ಯಾರ್ಥಿಗಳ ಯೋಗ ಶಿಬಿರದಲ್ಲಿ ಪಾಲ್ಗೊಂಡು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಸಚಿವ ಅಶೋಕ್, ರಕ್ತದೊತ್ತಡ, ಸಕ್ಕರೆ ಕಾಯಿಲೆ ನಿಯಂತ್ರಣ ಸಹಿತ ಆರೋಗ್ಯಯುತ ಜೀವನ ನಡೆಸಲು ಯೋಗಾಭ್ಯಾಸವು ರಹದಾರಿಯಾಗಿದೆ. ಸದೃಢ ಮನಸ್ಸು ಮತ್ತು ಆರೋಗ್ಯಕ್ಕೆ ಯೋಗಾಸನಗಳು ಪೂರಕ. ಸತತ ಯೋಗಾಭ್ಯಾಸದಿಂದ ಒತ್ತಡ ರಹಿತವಾದ ಆರೋಗ್ಯಯುತ ಜೀವನ ನಿರ್ವಹಿಸಬಹುದು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಯೋಗಾಸನದಿಂದ ಏಕಾಗ್ರತೆ ಸಾಧ್ಯವಾಗುತ್ತದೆ ಎಂದರು.