ಮಳವಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರತಿ ಹಂತದಲ್ಲೂ ಕೋಟ್ಯಂತರ ರೂ. ಹಣ ಬಿಡುಗಡೆಯಾಗುತ್ತಿದೆ. ಸರ್ಕಾರಿ ಸೌಲಭ್ಯಗಳು ಮಾತ್ರ ಅರ್ಹ ಫಲಾನುಭವಿ ಗಳಿಗೆ ತಲುಪುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಬೇಸರ ವ್ಯಕ್ತಪಡಿಸಿದರು.
ಪ್ರಾಮಾಣಿಕ ಕೆಲಸ ಮಾಡಿ: ಸರ್ಕಾರಿ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ಮಳವಳ್ಳಿ ಸೊಸೆಯನ್ನು ಗೆಲ್ಲಿಸಿದರೆ ಪ್ರಾಮಾಣಿಕವಾಗಿ ತಮ್ಮ ಸೇವೆ ಮಾಡುತ್ತೇನೆಂದು ಭರವಸೆ ನೀಡಿದ್ದೇನೆ. ಮತದಾರರ ಋಣ ತೀರಿಸಲು ಅಧಿಕಾರಿಗಳು ಕೈಜೋಡಿಸಬೇಕು ಎಂದು ತಿಳಿಸಿದರು.
ಮೃತ ರೈತ ಕುಟುಂಬಕ್ಕೆ ಪರಿಹಾರ: ಮದ್ದೂರು ತಾಲೂಕಿನ ಮಣಿಗೆರೆ ಸಮೀಪದ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ ಮಳವಳ್ಳಿ ತಾಲೂಕಿನ ಮಾದಹಳ್ಳಿ ಗ್ರಾಮದ ದೇವರಾಜು ಎಂಬ ಯುವಕ ಸಾವನ್ನಪ್ಪಿದ್ದು, ಮೃತ ಕುಟುಂಬಕ್ಕೆ ಸರ್ಕಾರದಿಂದ ನೀಡ ಲಾದ ಪರಿಹಾರ ತಲುಪಿದೆಯೇ ಎಂದು ಪ್ರಶ್ನಿಸಿದರು. ಎಇಇ ಪ್ರೇಮ್‌ಕುಮಾರ್ ಮಾತನಾಡಿ, 3 ಲಕ್ಷ ಇಲಾಖೆ ವತಿಯಿಂದ ತಲುಪಿದೆ ಎಂದು ಹೇಳಿದರು.
ರೋಗಿಗಳೊಂದಿಗೆ ಸೌಜನ್ಯ ತೋರಿ: ತಾಲೂಕು ಆಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟಗೊಳ್ಳು ತ್ತಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು, ಸದ್ಯದಲ್ಲಿಯೇ ಆಸ್ಪತ್ರಗೆ ಬೇಟಿ ನೀಡಿ ಸೌಲಭ್ಯಗಳ ಬಗ್ಗೆ ಪರಿಶೀಲಿಸಲಾಗು ವುದು, ಆರೋಗ್ಯ ಇಲಾಖೆ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದರು.
Advertisement
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳು ಎಷ್ಟರ ಮಟ್ಟಿಗೆ ಜನರಿಗೆ ತಲುಪಿದೆ ಮತ್ತು ಯಾವ ರೀತಿ ಸೌಲಭ್ಯ ನೀಡಲಾಗುತ್ತಿದೆ ಎಂಬುದನ್ನು ತಿಳಿಯುವ ಸಲುವಾಗಿ ಯೇ ಜನಸಂಪರ್ಕ ಸಭೆ ನಡೆಸಲಾಗುತ್ತಿದೆ. ಇಂದು ಅಧಿಕಾರಿಗಳ ಪರಿಚಯ ಹಾಗೂ ಸೌಲಭ್ಯಗಳ ಮಾಹಿತಿ ಪಡೆಯಲು ಸಭೆ ನಡೆಸಲಾಗಿದೆ. ಇಂದು ಅಧಿಕಾರಿಗಳು ಹೇಳುವುದಕ್ಕೂ ಸಾರ್ವಜನಿಕರ ಅಭಿಪ್ರಾಯಕ್ಕೂ ಒಂದೇ ಆಗಿರಬೇಕು, ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವ್ಯತ್ಯಾಸ ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು ಎಂದು ಹೇಳಿದರು.
Related Articles
Advertisement
ಸಭಾಂಗಣಕ್ಕೆ ಮನವಿ: ರೇಷ್ಮೆ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನಸ್ವಾಮಿ ಮಾತ ನಾಡಿ, ಮಳವಳ್ಳಿ ತಾಲೂಕಿನಲ್ಲಿ ಹೆಚ್ಚಾಗಿ ರೇಷ್ಮೆ ಬೆಳೆ ಬೆಳೆಯಲಾಗುತ್ತಿದೆ. ಮಾರುಕಟ್ಟೆಯಲ್ಲಿ ಜಾಗದ ಕೊರತೆ ಇದೆ. ಮಳೆ ಬಂದರೆ ರೈತರಿಗೆ ತುಂಬಾ ತೊಂದರೆಯಾಗುತ್ತಿದೆ. ರೇಷ್ಮೆ ಮಾರು ಕಟ್ಟೆ ಸಭಾಂಗಣ ನಿರ್ಮಿಸಿಕೊಡು ವಂತೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ತುರ್ತು ಸೌಲಭ್ಯ ಮಾಡಿ ಕೊಡಬೇಕೆಂದು ಸಂಸದರಲ್ಲಿ ಮನವಿ ಮಾಡಿದರು.
ಕಾವೇರಿ ಅಭಿಯಾನಕ್ಕೆ ಕೈಜೋಡಿಸಿ:
ತಮಿಳುನಾಡಿನ ಇಶಾ ಫೌಂಡೇಷನ್ ಮುಖ್ಯಸ್ಥ ಜಗ್ಗಿ ವಾಸುದೇವ ‘ಕಾವೇರಿ ಉಳಿಸಿ’ ಎಂಬ ಅಭಿಯಾನ ಆರಂಭಿಸಲಾಗುತ್ತಿದ್ದು, ಸೆ.6ರಂದು ಮಂಡ್ಯಕ್ಕೂ ಅಭಿಯಾನದ ತಂಡ ಬರಲಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೈಜೋಡಿಸುವುದರ ಮೂಲಕ ಪರಿಸರ ಮತ್ತು ಕಾವೇರಿ ಉಳಿವಿಗೆ ಕೈಜೋಡಿಸಬೇಕು ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಶಾಲೆಗಳಲ್ಲಿ ಶೌಚಾಕಲಯ ಸಮಸ್ಯೆ: ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ಸಮಸ್ಯೆ ಎದ್ದು ಕಾಣುತ್ತಿದೆ, ಹೆಣ್ಣು ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಶೌಚಾಲಯದ ಬಗ್ಗೆ ಗಮನಹರಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ಸೂಚಿಸಿದರು. ತಾಲೂಕಿನ ಕೆರೆಗಳು ತುಂಬಿಸಿ: ಮಳವಳ್ಳಿ ಭಾಗದ ಕೆರೆ ಕಟ್ಟೆಗಳು ಬರಿದಾಗಿವೆ ಎಂಬುದರ ಬಗ್ಗೆ ಸಾರ್ವಜನಿರು ದೂರು ನೀಡಿದ್ದಾರೆ. ನೀರಾವರಿ ಇಲಾಖೆ ಅಧಿಕಾರಿಗಳು ಕೂಡಲೇ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಮುಂದಾಗಬೇಕು, ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಸಂಸದೆ ಸುಮಲತಾ ಸಲಹೆ ನೀಡಿದರು.