ಕಲಬುರಗಿ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸು ವಲ್ಲಿ ಬ್ಯಾಂಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಾಮಾಣಿಕವಾಗಿ ಹಾಗೂ ತುರ್ತಾಗಿ ತಮ್ಮ ಕರ್ತವ್ಯ ನಿಭಾಯಿಸಬೇಕು ಎಂದು ಸಂಸದ ಡಾ| ಉಮೇಶ ಜಾಧವ ಹೇಳಿದರು.
ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಉದ್ದೇಶ, ಯೋಜನೆಗಳು ಯಶಸ್ವಿಯಾಗಬೇಕಾದರೆ ಬ್ಯಾಂಕ್‌ಗಳ ಪಾತ್ರ ಅತ್ಯಮೂಲ್ಯವಾಗಿದೆ. ಸರ್ಕಾರದ ಎಲ್ಲ ಯೋಜನೆಗಳು, ಅನುದಾನದ ಬಗ್ಗೆ ಬ್ಯಾಂಕ್ ಅ ಧಿಕಾರಿಗಳಿಗೆ ಮಾಹಿತಿ ಇರುತ್ತದೆ. ಹೀಗಾಗಿ ಫಲಾನುಭವಿಗಳಿಗೆ ಸರ್ಕಾರದ ಎಲ್ಲ ಯೋಜನೆಗಳನ್ನು ತಲುಪಿಸುವ ಗುರಿಯನ್ನು ಬ್ಯಾಂಕ್‌ಗಳು ಹೊಂದಿರಬೇಕು ಎಂದು ಸಲಹೆ ನೀಡಿದರು.
ಹಲವು ಬ್ಯಾಂಕ್‌ಗಳು ಮತ್ತು ಸರ್ಕಾರದ ವಿವಿಧ ಇಲಾಖೆಗಳಿಗೆ ಫಲಾನುಭವಿಗಳಾಗಲಿ, ಗ್ರಾಹಕರಾಗಲಿ ಸರ್ಕಾರದ ಯೋಜನೆ ಪಡೆಯಲು ಹೆಚ್ಚು ಅಲೆದು ಕಾಯುವಂತೆ ಮಾಡಬಾರದು ಎಂದು ಅ ಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ಡಾ| ದಿಲೀಷ್ ಸಸಿ ಮಾತನಾಡಿ, ಬ್ಯಾಂಕ್ ಅ ಧಿಕಾರಿಗಳು ಸೂಕ್ತ ಸಮಯಕ್ಕೆ ನಿರ್ಧಾರ ತೆಗೆದುಕೊಂಡು, ಫಲಾನುಭವಿಗಳ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದ ಅನುದಾನ, ಯೋಜನೆಗಳನ್ನು ಅರ್ಹರಿಗೆ ತಲುಪಿಸುವಂತೆ ಮಾಡಬೇಕೆಂದು ಹೇಳಿದರು.
ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್, ಡಿಎಲ್ ಆರ್‌ಸಿ ಆಗಿರುವ ಇಂತೆಸಾರ್ ಹುಸೇನ್ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಲಾಭಪಡೆಯಲು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಬ್ಯಾಂಕ್‌ಗಳು ವಿನಾಕಾರಣ ಬಾಕಿ ಉಳಿಸಿಕೊಳ್ಳದೇ, ಕೂಡಲೇ ವಿಲೇವಾರಿ ಮಾಡಬೇಕು. ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಸವಲತ್ತು ದೊರಕುವಂತೆ ಮಾಡಲು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕೆಂದು ವಿವಿಧ ಬ್ಯಾಂಕ್‌ಗಳ ಅ ಧಿಕಾರಿಗಳಿಗೆ ಕರೆ ನೀಡಿದರು. ಸಭೆಯಲ್ಲಿ ವಿವಿಧ ಬ್ಯಾಂಕ್ ಹಾಗೂ ಸರ್ಕಾರದ ಹಲವು ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.