ಸಂಕೇಶ್ವರ: ನಗರದ ಕಂಟೈನಮೆಂಟ್ ಪ್ರದೇಶದಲ್ಲಿನ ನಾಗರಿಕರಿಗೆ ದಿನಸಿ, ತರಕಾರಿ ಮತ್ತಿತರ ವಸ್ತುಗಳನ್ನು ಮನೆಬಾಗಿಲಿಗೆ ಕಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು.
ಕೋವಿಡ್ ನಿಯಂತ್ರಣ ಕುರಿತು ಪುರಸಭೆ ಉದ್ಯಾನದಲ್ಲಿ ನಡೆದ ತಾಲೂಕು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಕೋವಿಡ್ ತಡೆಗಟ್ಟಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎಲ್ಲರೂ ಸಹಕರಿಸಿದರೆ ಸೋಂಕು ಹರಡುವಿಕೆಯನ್ನು ತಡೆಗಟ್ಟುವುದು ಸಾಧ್ಯವಾಗಲಿದೆ ಎಂದರು.
ನಗರದಲ್ಲಿನ ಕಂಟೈನ್‌ಮೆಂಟ್ ಝೋನ್‌ನಲ್ಲಿ ವೈದ್ಯಕೀಯ ಸೌಲಭ್ಯ, ಅಗತ್ಯ ವಸ್ತುಗಳ ಪೂರೈಕೆ, ಯಾರಾದರು ರೈತರು ಇದ್ದರೆ ಹೊಲಗಳಿಗೆ ಹೊಗಲು, ಜಾನುವಾರುಗಳಿಗೆ ಮೇವಿನ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡಿ. ಕಾರ್ಮಿಕರು, ವ್ಯಾಪಾರಸ್ಥರು, ಸೇರಿದಂತೆ ಅನೇಕರಿಗೆ ಸರಕಾರದ ಯೋಜನೆಗಳನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಮತ್ತಿತರ ಇಲಾಖೆಯ ಸದಸ್ಯರನ್ನು ಒಳಗೊಂಡ ತಂಡವು ಐಓನ್‌ನಲ್ಲಿಯ ಜನರ ಸಮಗ್ರ ಮಾಹಿತಿ ಕಲೆಹಾಕಬೇಕು. ಆರೋಗ್ಯ ಸಮಸ್ಯೆ ಇದ್ದರೆ ಪರಿಶೀಲಿಸಿ ತಕ್ಷಣವೇ ಮಾಹಿತಿ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷÂ ತೋರಬಾರದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಓಡಾ| ರಾಜೇಂದ್ರ, ಉಪವಿಭಾಗಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ ಅಶೋಕ ಗುರಾಣಿ, ಸಿಪಿಐ ಗುರುರಾಜ ಕಲ್ಯಾಣಶೆಟ್ಟಿ, ತಾಲೂಕಾ ವೈದ್ಯಾಧಿಕಾರಿ ಡಾ| ಉದಯಕುಮಾರ ಕುಡಚಿ, ಬಿರಾದಾರ ಪಾಟೀಲ, ಡಾ| ದತ್ತಾತ್ರೆಯ ದೊಡಮನಿ, ಪಿಎಸ್‌ಐ ಗಣಪತಿ ಕೊಗನಳ್ಳಿ, ಸಂಕೇಶ್ವರ ಪುರಸಭೆ ಮುಖ್ಯಾಧಿಕಾರಿ ಜಗದೀಶ ಈಟಿ, ಇತರರಿದ್ದರು.