ಮಾಗಡಿ: ಸರ್ಕಾರದಿಂದ ಬರುವ ಸವಲತ್ತುಗಳನ್ನು ಅಧಿಕಾರಿಗಳು ನೇರವಾಗಿ ಫಲಾನುಭಗಳಿಗೆ ತಲುಪಿಸಬೇಕು ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ್ಯನಾಯಕ್ ಸೂಚನೆ ಕೊಟ್ಟರು.
ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಆರನೇ ಸಾಮಾಜಿಕ ನ್ಯಾಯ ಸಮಿತಿ ಸಭೆ ಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮಗಳು ಅಭಿವೃದ್ಧಿಯಾಗಬೇ ಕಾದರೆ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗಳಿಗೆ ಹೆಚ್ಚಿನ ಒತ್ತನ್ನು ಅಧಿಕಾರಿಗಳು ನೀಡಬೇಕು. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆ ಹಾಗೂ ಸವಲತ್ತುಗಳನ್ನು ಒದಗಿಸುತ್ತಿದ್ದು, ಈ ಎಲ್ಲದರ ಬಗ್ಗೆ ಸ್ಥಳೀಯ ತಾಪಂ ಸದಸ್ಯರ ಗಮನಕ್ಕೆ ತಂದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅನುಷ್ಠಾನಗೊಳಿ ಸಬೇಕೆಂದರು.
ತಾಲೂಕಿನಲ್ಲಿ ಯಾವ ಗ್ರಾಮಗಳಲ್ಲಿ ಅಂಗನವಾಡಿ ಕಟ್ಟಡ ಹಾಗೂ ನಿವೇಶನ ಇಲ್ಲದ ಕಡೆ ನಿವೇಶನ ಪಡೆದರೆ, ಕಟ್ಟಡ ನಿರ್ಮಿಸಲು ಅನುದಾನ ಬಿಡುಗಡೆ ಮಾಡಿಸಲಾಗುವುದು. ಕಳೆದ 2 ತಿಂಗಳಿನಿಂದ ಚುನಾವಣೆ ನೀತಿ ಸಂಹಿತೆ ಇದ್ದ ಕಾರಣ ಅಭಿವೃದ್ಧಿ ಕಾರ್ಯ ಕುಂಠಿತವಾಗಿದೆ. ತಾಲೂಕಿನಾದ್ಯಂತ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯರುವ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಧನಂಜಯ್ಯ ಸೂಚನೆ ನೀಡಿದರು.
ಶಾಲೆಗಳು ಆರಂಭವಾಗಿದ್ದು, ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಸಿಕೊಳ್ಳುವುದರ ಜೊತೆಗೆ ಹಾಸ್ಟೆಲ್ಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು. ತಾಲೂಕಿನಲ್ಲಿರುವ 13 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿಗದಿತ ವೇಳೆ ಕರ್ತವ್ಯಕ್ಕೆ ಹಾಜರಿರಬೇಕು. ರೋಗಿಗಳನ್ನು ಕಾಯಿಸಬಾರದು, ಕೇಂದ್ರಗಳ ಸುತ್ತಲೂ ಸ್ವಚ್ಛತೆ ಕಾಪಾಡಬೇಕು ಎಂದು ಟಿಎಚ್ಒಗೆ ತಿಳಿಸಿದರು.
ಸ್ಥಾಯಿ ಸಮಿತಿ ಸದಸ್ಯರಾದ ವೆಂಕಟೇಶ್, ಸುಗುಣ, ಗೀತಾ, ಎಂ.ಜಿ. ನರಸಿಂಹಮೂರ್ತಿ, ಕೃಷಿ ಇಲಾಖೆ ಸಹಾ ಯಕ ನಿರ್ದೇಶಕ ಅಶೋಕ್, ತೋಟ ಗಾರಿಕೆ ಇಲಾಖೆ ನಾಗರಾಜ್, ಟಿಎಚ್ಒ ಚಂದ್ರಕಲಾ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ನಾಗರಾಜ್, ಬಿಇಒ ಸಿದ್ದೇಶ್ವರ್, ಅರಣ್ಯ ಇಲಾಖೆ ಅಧಿಕಾರಿಗಳು ಇದ್ದರು.