Advertisement

ಯೋಜನೆ ಫಲಾನುಭವಿಗೆ ತಲುಪಿಸಿ

02:48 PM Mar 18, 2022 | Team Udayavani |

ಕಲಬುರಗಿ: ಬಡವರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಹಲ ವಾರು ಯೋಜನೆಗಳಿದ್ದು, ಅವುಗಳು ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಸಾರ್ಥಕತೆ ಹೊಂದಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶರಣಗೌಡ ಡಿ. ಪಾಟೀಲ ಹೇಳಿದರು.

Advertisement

ನಗರದ ಪಂಚಾಯತ್‌ ರಾಜ್‌ ಕಚೇರಿ ಆವರಣದಲ್ಲಿ 2020-21ನೇ ಸಾಲಿನ ಜಿ.ಪಂ ಅಂಗವಿಕಲರ ಅನುದಾನದಡಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಮಲಾಪುರ ತಾಲೂಕಿನ ಅಂಬಲಗಾ ಗ್ರಾಮದ ಅವಿನಾಶ ಸಿಂಗೆ ಅವರಿಗೆ ತ್ರಿಚಕ್ರ ವಾಹನ ವಿತರಿಸಿ ಅವರು ಮಾತನಾಡಿದರು.

ಐದು ವರ್ಷ ಕಾಲ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಕ್ಷೇತ್ರದಲ್ಲಿ ಮಾದರಿ ಕಾರ್ಯ ಕೈಗೊಂಡಿದ್ದೇನೆ. ವಿ.ಕೆ. ಸಲಗರದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ರಾಜ್ಯದಲ್ಲೇ ಮಾದರಿ ಎನ್ನಬಹುದಾದ ರೈತರಿಗೆ ನೇರವಾಗಿ ಮಾರಾಟದ ಅವಕಾಶ ಕಲ್ಪಿಸುವ ಸಂತೆ ಕಟ್ಟೆ ನಿರ್ಮಿಸಲಾಗಿದೆ. ಇದರಿಂದ ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗಿದೆ ಎಂದರು.

ಕಲಬುರಗಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಮುಖಂಡ ವಿಜಯಕುಮಾರ ಜಿ.ರಾಮಕೃಷ್ಣ ತ್ರಿಚಕ್ರ ವಾಹನ ವಿತರಿಸಿ, ಒಳ್ಳೆಯ ಕೆಲಸ ಮಾಡಿದಾಗ ಜನರು ನೆನಪಿಸಿಕೊಳ್ಳುತ್ತಾರೆ. ಶರಣಗೌಡ ಪಾಟೀಲ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್‌ ಮುಖಂಡರಾದ ಶರಣಬಸ್ಸಪ್ಪ ಹಾಗರಗಿ, ಕಮಲಾಪುರ ಮಹಿಳಾ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷೆ ನಿರ್ಮಲಾ ಬರಗಾಲಿ ಹಾಗೂ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next