Advertisement

ಕಂದಾಯ ಇಲಾಖೆ ಸೌಲಭ್ಯ ಜನಕ್ಕೆ ತಲುಪಿಸಿ: ರಾಗಪ್ರಿಯಾ

03:10 PM Apr 23, 2022 | Team Udayavani |

ಯಾದಗಿರಿ: ಸರ್ಕಾರದ ಕಂದಾಯ ಇಲಾಖೆಯಲ್ಲಿನ ಯೋಜನೆಯ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಸೂಚಿಸಿದರು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಯಾದಗಿರಿ ತಾಲೂಕಿನ 4, ಶಹಾಪುರ 13, ಸುರಪುರ 8, ಗುರುಮಿಠಕಲ್‌ 6, ವಡಿಗೇರಾ 8, ಹುಣಸಗಿ 16 ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ಒಟ್ಟು 55 ಸಾಂಪ್ರದಾಯಿಕ ರುದ್ರಭೂಮಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಸಹ ಪ್ರಗತಿ ವರದಿಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗಿರುತ್ತದೆ ಎಂದು ತಿಳಿಸಿದರು.

ಏಪ್ರಿಲ್‌ ತಿಂಗಳಲ್ಲಿ ಯಾದಗಿರಿ ತಾಲೂಕು 2 ಗುರುಮಿಠಕಲ್‌ 5 ಒಟ್ಟು 7 ಗ್ರಾಮಗಳ ಸ್ಮಶಾನ ಮಂಜೂರು ಮಾಡಲಾಗಿರುತ್ತದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜಮೀನು ಸರ್ವೇ ಕಾರ್ಯಗಳ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಇಲಾಖೆಯ ಹಾಗೂ ನೋಂದಾಯಿತ ಸರ್ವೇಯರ್‌ಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡಿದ ನಂತರ, ಸಂಬಂಧಪಟ್ಟ ಸ್ಥಳಕ್ಕೆ ಭೇಟಿ ನೀಡಿ, ಶೀಘ್ರದಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸರ್ವೇಯರ್‌ ಗಳ ಪ್ರಗತಿಯನ್ನು ನಿರಂತರವಾಗಿ ಗಮನಿಸಲು ಅವರು ತಿಳಿಸಿದರು.

Advertisement

ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಯಾದಗಿರಿ ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಶಹಾಪುರ ತಹಶೀಲ್ದಾರ್‌ ಮಧುರಾಜ್‌, ಸುರಪುರ ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ, ವಡಿಗೇರಾ ತಹಶೀಲ್ದಾರ್‌ ಸುರೇಶ್‌ ಅಂಕಲಗಿ, ಗುರುಮಿಠಕಲ್‌ ತಹಶೀಲ್ದಾರ್‌ ಶರಣಬಸವ, ಹುಣಸಗಿ ತಹಶೀಲ್ದಾರ್‌ ಅಶೋಕ ಸುರಪುರಕರ್‌ ಹಾಗೂ ಇನ್ನಿತರ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next