Advertisement

ಮತ್ತೊಮ್ಮೆ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ

04:50 PM Aug 05, 2018 | Team Udayavani |

ಹಾವೇರಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಮತ್ತೆ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಕರೆ ನೀಡಿದರು.

Advertisement

ನಗರದ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷ ನಗರಸಭೆಯಲ್ಲಿ ಅಧಿ ಕಾರ ನಡೆಸಿದ ಕಾಂಗ್ರೆಸ್‌ ಪಕ್ಷದ ನಗರ ಸೇವಕರು ಹಲವು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಜೊತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ 50 ಕೋಟಿ ರೂ.ಗಳ ವಿಶೇಷ ಅನುದಾನ ನೀಡಿದ್ದರಿಂದ ನಗರದಲ್ಲಿ ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆಗೆ ಬೂತ್‌ ಮಟ್ಟದ ಸಂಘಟನೆ ಅವಶ್ಯ. ಪಕ್ಷ ಗುರುತಿಸಿದ ಅಭ್ಯರ್ಥಿಗಳಿಗೆ ವೈಮನಸ್ಸು ಬಿಟ್ಟು ಬೆಂಬಲಿಸಬೇಕು. ಪಕ್ಷಕ್ಕೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಕಾರ್ಯಕರ್ತರನ್ನು ಗುರುತಿಸಿ ಉಮೇದುವಾರಿಕೆ ಸಲ್ಲಿಸಲು ಅನುಕೂಲ ಮಾಡಿಕೊಡಲಾಗುವುದು ಎಂದರು.

ಮಾಜಿ ಸಚಿವ ಬಸವರಾಜ ಶಿವಣ್ಣನವರ ಮಾತನಾಡಿ, ವಾರ್ಡ್‌ವಾರು ಸಮಿತಿ ರಚನೆ, ಪಕ್ಷದ ಮುಖಂಡರ ಹಾಗೂ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಬೇಕು. ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಅಭ್ಯರ್ಥಿಗಳನ್ನು ಗುರುತಿಸಿ ಟಿಕೆಟ್‌ ನೀಡಿದರೆ ಪಕ್ಷದ ಗೆಲುವು ಸಾಧ್ಯ ಎಂದರು.

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಪ್ರಾಸ್ತಾವಿಕ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒದಗಿಸಿದ್ದ ವಿಶೇಷ ಅನುದಾನಗಳನ್ನು ಹಾವೇರಿ ನಗರದ ಸಮಗ್ರ ಅಭಿವೃದ್ಧಿಗೆ ಬಳಸಿಕೊಳ್ಳಲಾಗಿದೆ. 50 ಕೋಟಿ ರೂ. ವಿಶೇಷ ಅನುದಾನ ಅಷ್ಟೇ ಅಲ್ಲದೇ 28 ಕೋಟಿ ರೂ.ಗಳಲ್ಲಿ ರಸ್ತೆ, ಚರಂಡಿ ನಿರ್ಮಾಣ, 5.40 ಲಕ್ಷ ರೂ.ಗಳ ವೆಚ್ಚದಲ್ಲಿ ನಗರಸಭೆ ಕಚೇರಿಗೆ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ನಗರಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಆತ್ಮಸಾಕ್ಷಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

Advertisement

ಜಿಪಂ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಪಕ್ಷದ ಮುಖಂಡರಾದ ಎಸ್‌ಎಫ್‌ಎನ್‌ ಗಾಜಿಗೌಡ್ರ, ಎಂ.ಎಂ. ಹಿರೇಮಠ, ರತ್ನಾಬಾಯಿ ಭೀಮಕ್ಕನವರ, ಬಸವರಾಜ ಪೇಲನವರ, ಮಾದೇಗೌಡ ಗಾಜಿಗೌಡ್ರ, ಪರಶುರಾಮ ಅಡಕಿ, ಜಗದೀಶ ಬಸೇಗಣ್ಣಿ, ಪ್ರಭು ಬಿಷ್ಟನಗೌಡ್ರ, ಜಗದೀಶ ಬೆಟಗೇರಿ, ಅಡಿವೆಪ್ಪ ಡೊಳ್ಳಿನ, ಐ.ಯು. ಪಠಾಣ ಹಾಗೂ ಇತರರು ಇದ್ದರು.

ಶತಾಯಗತಾಯ ಗೆಲ್ಲಿಸಿ
ಹಾವೇರಿ ನಗರಸಭೆಯ ಕಳೆದ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆಯಲ್ಲಿ ಗೊಂದಲಗಳಾಗಿ ಕೇವಲ 13 ಸ್ಥಾನಗಳಲ್ಲಿ ಗೆಲುವು ಸಾಧಿ ಸಿದ್ದೇವು. ಬಿಜೆಪಿ ಒಳಜಗಳದಿಂದ ಅ ಧಿಕಾರ ಸಿಕ್ಕಿತ್ತು. ಈ ಬಾರಿ ಈ ಚುನಾವಣೆಯಲ್ಲಿ ಗಂಭೀರವಾಗಿ ಪರಿಗಣಿಸಿ, ಶತಾಯಗತಾಯ ಎಲ್ಲ ವಾರ್ಡ್ ಗಳಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಲು ಪರಿಶ್ರಮಿಸಬೇಕು ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಕಾರ್ಯಕರ್ತರಿಗೆ ಕರೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next